Advertisement

Russia: ರಷ್ಯಾದ ಪೆಟ್ರೋಲ್ ಬಂಕ್‌ನಲ್ಲಿ ಭೀಕರ ಸ್ಫೋಟ: 35 ಮಂದಿ ಮೃತ್ಯು, ಹಲವರಿಗೆ ಗಾಯ

03:05 PM Aug 15, 2023 | Team Udayavani |

ರಷ್ಯಾ: ಪೆಟ್ರೋಲ್ ಬಂಕ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 35 ಜನರು ಮೃತಪಟ್ಟಿದ್ದು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ರಷ್ಯಾದ ಗಣರಾಜ್ಯದ ಡಾಗೆಸ್ತಾನ್‌ನಲ್ಲಿ ನಡೆದಿದೆ.

Advertisement

ಸ್ಪೋಟದ ಬಳಿಕ ಪೆಟ್ರೋಲ್ ಬಂಕ್ ಗೆ ಬೆಂಕಿ ವ್ಯಾಪಿಸಿ ಭಾರಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ, ಘಟನೆಯಲ್ಲಿ 35 ಮಂದಿ ಮೃತಪಟ್ಟಿದ್ದು ಸುಮಾರು ಎಂಬತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಮೃತಪಟ್ಟವರಿಗೆ ರಷ್ಯಾ ಅಧ್ಯಕ್ಷ ಪುಟಿನ್ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

ಘಟನಾ ಸ್ಥಳದಲ್ಲಿ ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಫೋಟ ಹೇಗೆ ಸಂಭವಿಸಿತೆಂಬ ವಿಚಾರವಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

6 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ನಗರವಾದ ಮಖಚ್ಕಲಾ, ಚೆಚೆನ್ಯಾದ ಗಡಿಯಲ್ಲಿರುವ ಡಾಗೆಸ್ತಾನ್‌ ನಲ್ಲಿ ಘಟನೆ ನಡೆದಿದೆ.
ಸೋಮವಾರ ತಡ ರಾತ್ರಿ ಸ್ಫೋಟದ ಶಬ್ದ ಕೇಳಿಸಿತು ಎಂದು ಡಾಗೆಸ್ತಾನ್ ಆಡಳಿತದ ಮುಖ್ಯಸ್ಥ ಸೆರ್ಗೆಯ್ ಮೆಲಿಕೋವ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಂಡಿದ್ದಾರೆ.

Advertisement

ಪ್ರತ್ಯಕ್ಷದರ್ಶಿಯ ಮಾಹಿತಿ ಪ್ರಕಾರ ಪೆಟ್ರೋಲ್ ಬಂಕ್ ಬಳಿ ವ್ಯಕ್ತಿಯೋರ್ವ ಕಾರು ನಿಲ್ಲಿಸಿದ್ದು ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಬಂಕ್ ಗೆ ವ್ಯಾಪಿಸಿ ಸ್ಪೋಟಗೊಂಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Kushtagi: ಹ್ಯಾಂಡಲ್ ಆಸರೆ ಇಲ್ಲದೇ, ಎರಡು ಕೈ ಬಿಟ್ಟು ಸೈಕಲ್ ಚಲಾಯಿಸುವ 61 ವರ್ಷದ ರೈತ

Advertisement

Udayavani is now on Telegram. Click here to join our channel and stay updated with the latest news.

Next