ಶ್ರೀನಗರ್: ಜಮ್ಮು-ಕಾಶ್ಮೀರದ ಶೋಪಿಯಾನ್ ಪ್ರದೇಶದಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಉಗ್ರಗಾಮಿ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಬಲಿಯಾಗಿರುವ ಘಟನೆ ಸೋಮವಾರ ನಸುಕಿನ ವೇಳೆ ಸಂಭವಿಸಿದೆ.
ಇದನ್ನೂ ಓದಿ:ಜಾತ್ರೆಯಿಂದ ಬರುತ್ತಿದ್ದವನಿಗೆ ಎದುರಾಯಿತು ಮೃತ್ಯು: ಬೈಕ್ ಅಪಘಾತದಲ್ಲಿ ವಿದ್ಯಾರ್ಥಿ ಸಾವು
ವರದಿಗಳ ಪ್ರಕಾರ, ಶೋಪಿಯಾನ್ ಮಾನಿಹಾಲ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಜಮ್ಮು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಮತ್ತು ಸಿಆರ್ ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ಈ ಎನ್ ಕೌಂಟರ್ ನಡೆದಿರುವುದಾಗಿ ತಿಳಿಸಿದೆ.
ಸ್ಥಳದಲ್ಲಿ ಮೂವರು ಉಗ್ರರು ಅಡಗಿದ್ದು, ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಜಂಟಿ ಸಾವನ್ನಪ್ಪಿರುವುದಾಗಿ ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿರುವುದಾಗಿ ಹೇಳಿದೆ.
ಮಾನಿಹಾಲ್ ಪ್ರದೇಶದ ಸುತ್ತಮುತ್ತ ಹಲವು ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಾವನ್ನಪ್ಪಿರುವ ಉಗ್ರರು ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ.