Advertisement

ಜಮ್ಮು-ಕಾಶ್ಮೀರ: ಎಲ್‌ಇಟಿಯ ಇಬ್ಬರು ಉಗ್ರರ ಹತ್ಯೆ

08:11 PM Aug 30, 2022 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಮಂಗಳವಾರ ಉಗ್ರರು ಮತ್ತು ಭದ್ರತಾ ಪಡೆಯ ಗುಂಡಿನ ಕಾಳಗ ನಡೆದಿದ್ದು, ಯೋಧರು ಲಷ್ಕರ್‌-ಎ-ತೊಯ್ಬಾದ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ.

Advertisement

ಶೋಪಿಯಾನ್‌ನ ನಾಗ್ಬಲ್‌ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿಯನ್ನಾಧರಿಸಿ ಭದ್ರತಾ ಪಡೆ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಪ್ರತಿಯಾಗಿ ಯೋಧರು ಗುಂಡು ಹಾರಿಸಿದ್ದು, ಗುಂಡಿನೇಟಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ. ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್‌ ವಕ್ತಾರರು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next