ರಾಯಿಪುರ್: ಛತ್ತೀಸ್‌ಗಢದ ದಂತೇವಾಡ ಜಿಲ್ಲೆಯಲ್ಲಿ ಬಿಜೆಪಿ ಶಾಸಕ ಮತ್ತು ಇತರ ನಾಲ್ವರು ಭದ್ರತಾ ಸಿಬಂದಿಯನ್ನು ಇತ್ತೀಚೆಗೆ ಗುಂಡಿಕ್ಕಿ ಹತ್ಯಗೈದ ಆರೋಪದ ಮೇಲೆ ಇಬ್ಬರು ನಕ್ಸಲರನ್ನು ಪೊಲೀಸರು ಗುರುವಾರ ಎನ್‌ಕೌಂಟರ್‌ನಲ್ಲಿ ಹತ್ಯೆಗೈದಿದ್ದಾರೆ. ನಕ್ಸಲ್ ನಿಗ್ರಹ ಕಾರ್ಯಚರಣೆಯಲ್ಲಿ ತೊಡಗಿದ್ದ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಬೆಳಗ್ಗೆ 5:30ಕ್ಕೆ ಕಾರ್ಯಾಚರಣೆ ಆರಂಭಿಸಿತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ್ ಗಾಯಗೊಂಡಿದ್ದಾನೆ ಎಂದು ಹೇಳಿದ್ದಾರೆ. ಗುಂಡಿನ ಚಕಮಕಿ ಬಳಿಕ ಇಬ್ಬರು ನಕ್ಸಲರು ಮತ್ತು ಎ.315 ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.
ಎಲ್‌ಒಸಿ ವಹಿವಾಟು ಸ್ಥಗಿತ