Advertisement

ಕಾಶ್ಮೀರದಲ್ಲಿ ಮುಂದುವರಿದ ಉಗ್ರ ಸಂಹಾರ: ಗುರುವಾರ ಇಬ್ಬರ ಹತ್ಯೆ

07:10 PM Jun 16, 2022 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಕುಲ್ಗಾಮ್‌ನ ಮಿಶಿಪೋರಾ ಪ್ರದೇಶದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ಮಂಗಳವಾರ ಆರಂಭಿಸಿದ್ದು,ಭದ್ರತಾ ಪಡೆಗಳೊಂದಿಗೆ ಆರಂಭಿಕ ಗುಂಡಿನ ದಾಳಿಯ ನಂತರ, ಉಗ್ರರು ಮಿಶಿಪೋರಾದ ಸಾಮಾನ್ಯ ಪ್ರದೇಶದೊಳಗೆ ಸ್ಥಳಾಂತರಗೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಆದಾಗ್ಯೂ, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದವು, ಇದರ ಪರಿಣಾಮವಾಗಿ ಗುರುವಾರ ಹೊಸ ಗುಂಡಿನ ಚಕಮಕಿ ನಡೆದು ಇಬ್ಬರು ಉಗ್ರರ ಹತ್ಯೆಗೈಯಲಾಗಿದೆ.

ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದು, ನೆರೆಯ ಅನಂತನಾಗ್ ಜಿಲ್ಲೆಯ ಹಂಗಲ್‌ಗುಂಡ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮತ್ತೊಂದು ಎನ್‌ಕೌಂಟರ್ ನಡೆದಿದೆ ಎಂದು ವಕ್ತಾರರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next