Advertisement

ಸೇನಾಪಡೆ ಗುಂಡಿಗೆ ಇಬ್ಬರು ಉಗ್ರರು ಬಲಿ: ಮಹಾರಾಷ್ಟ್ರ ಎಟಿಎಸ್ ನಿಂದ ಓರ್ವನ ಬಂಧನ

01:08 PM Jun 14, 2022 | Team Udayavani |

ನವದೆಹಲಿ: ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳವು ಉಗ್ರ ಸಂಘಟನೆಗೆ ನೇಮಕಾತಿ ಮತ್ತು ಧನಸಹಾಯ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದ ವ್ಯಕ್ತಿಯನ್ನು ಬಂಧಿಸಿದೆ ಎಂದು ಎಟಿಎಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

Advertisement

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ 32 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮಂಗಳವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದರೊಂದಿಗೆ, ಮಹಾರಾಷ್ಟ್ರ ಎಟಿಎಸ್ ಈ ವರ್ಷದ ಮೇ ತಿಂಗಳಿನಿಂದ ಇದುವರೆಗೆ ನಾಲ್ವರನ್ನು ಬಂಧಿಸಿದೆ.

ಬಂಧಿತ ಆರೋಪಿ, ಮೇ 24 ರಂದು ಬಂಧನಕ್ಕೊಳಗಾದ ಎಲ್ ಇ ಟಿ ಉಗ್ರರ ನಂಟು ಹೊಂದಿದ್ದ ಜುನೈದ್ ಮೊಹಮ್ಮದ್ ಎಂಬಾತನಿಗೆ ಹಣ ವರ್ಗಾಯಿಸಿದ್ದ ಎಂದು ತಿಳಿದು ಬಂದಿದೆ.

ಪಾಕ್ ಉಗ್ರ ಸೇರಿ ಇಬ್ಬರ ಹತ್ಯೆ

ಶ್ರೀನಗರದಲ್ಲಿ ಬೆಮಿನಾ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಭದ್ರತಾ ಪಡೆಗಳೊಂದಿಗೆ ಎನ್‌ಕೌಂಟರ್‌ ನಡೆದಿದ್ದು,ಎಲ್‌ಇಟಿಯ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಕಾರ್ಯಾಚರಣೆಯಲ್ಲಿ ಒಬ್ಬ ಪೊಲೀಸ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ.

Advertisement

ಹತ್ಯೆಗೀಡಾದ ಉಗ್ರರು ಪಾಕಿಸ್ಥಾನದ ಫೈಸಲಾಬಾದ್ ನಿವಾಸಿ ಅಬ್ದುಲ್ಲಾ ಗೌಜ್ರಿ ಮತ್ತು ಅನಂತನಾಗ್ ಜಿಲ್ಲೆಯ ನಿವಾಸಿ ಆದಿಲ್ ಹುಸೇನ್ ಮಿರ್ ಅಲಿಯಾಸ್ ಸುಫಿಯಾನ್ ಎಂದು ಗುರುತಿಸಲಾಗಿದೆ.

ಸೋಪುರ್ ನಲ್ಲಿ ನಡೆದಿದ್ದ ಎನ್ ಕೌಂಟರ್ ವೇಳೆ ಈ ಇಬ್ಬರು ತಪ್ಪಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : 10ನೇ ತರಗತಿ ಪರೀಕ್ಷೆಯಲ್ಲಿ ಜಸ್ಟ್ ಪಾಸ್ ಆದ ವಿದ್ಯಾರ್ಥಿ ಈಗ ಐಎಎಸ್‌ ಅಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next