Advertisement

ಜಮ್ಮು-ಕಾಶ್ಮೀರ-ಅನಂತ್ ನಾಗ್ ; ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ

05:01 PM Jul 10, 2021 | Team Udayavani |

ಜಮ್ಮು-ಕಾಶ್ಮೀರ: ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಹತ್ಯೆಗೀಡಾಗಿರುವ ಘಟನೆ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಶನಿವಾರ (ಜುಲೈ 10) ಮಧ್ಯಾಹ್ನ ನಡೆದಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ ವೇಗಿ ಪಂಕಜ್ ಸಿಂಗ್

ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರರು ಸಾವನ್ನಪ್ಪಿರುವುದಾಗಿ ಮೂಲಗಳು ಹೇಳಿವೆ.

ಅನಂತ್ ನಾಗ್ ಜಿಲ್ಲೆಯ ಕವರಿಗಾಮ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದಾಗ, ಗುಂಡಿನ ಚಕಮಕಿ ಆರಂಭವಾಗಿತ್ತು. ಉಗ್ರರು ಅಡಗಿರುವ ಸ್ಥಳವನ್ನು ಸುತ್ತುವರೆದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಭದ್ರತಾ ಪಡೆಯ ಪ್ರತಿದಾಳಿಗೆ ಇಬ್ಬರು ಉಗ್ರರು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

ಸಾವನ್ನಪ್ಪಿರುವ ಉಗ್ರರ ಗುರುತನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ. ಎನ್ ಕೌಂಟರ್ ಬಳಿಕವೂ ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಕಳೆದ 24ಗಂಟೆಗಳಲ್ಲಿ ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಐವರು ಉಗ್ರರು ಸಾವನ್ನಪ್ಪಿದ ಎರಡು ದಿನಗಳ ಬಳಿಕ ಈ ಎನ್ ಕೌಂಟರ್ ನಡೆದಿದೆ ಎಂದು ವರದಿ ವಿವರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next