ಫತೇಪುರ್: ಜಿಲ್ಲೆಯ ಹುಸೈಂಗಂಜ್ ಪೊಲೀಸ್ ವೃತ್ತದ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಆರು ಮಂದಿ ಕಾಮಾಂಧ ಯುವಕರು ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ.
ಎಸ್ಪಿ ಫತೇಪುರ್ ರಾಜೇಶ್ ಕುಮಾರ್ ಸಿಂಗ್ ಪ್ರಕಾರ, ಎಲ್ಲಾ ಆರು ಯುವಕರನ್ನು ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಗ್ರಾಮದ ಜಾತ್ರೆಗೆ ತೆರಳಿ ಬಾಲಕಿಯರು ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿಯರ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಘಟನೆಯ ಬಳಿಕ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕೆಂಬ ಕೂಗು ಜೋರಾಗಿದೆ.