Advertisement

ದ.ಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿ: ಒಂದೇ ದಿನ ಇಬ್ಬರು ಸಾವು

03:23 PM Jul 06, 2020 | keerthan |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಅಟ್ಟಹಾಸ ಅಂಕೆ ಮೀರುತ್ತಿದೆ. ಇಂದು ಬೆಳಿಗ್ಗೆ ಇಬ್ಬರು ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ.

Advertisement

ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ ಮತ್ತು ಉಳ್ಳಾಲ ನಿವಾಸಿ ಇಂದು ಕೋವಿಡ್ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ.

ಸಂತೋಷ್ ನಗರದ 52 ವರ್ಷದ ವ್ಯಕ್ತಿ ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು. ಉಳ್ಳಾಲದ ವ್ಯಕ್ತಿಉ ಹೆಚ್ಚಿನ ಮಾಹಿತಿ ತಿಳಿದಿಲ್ಲ.

ಇಂದಿನ ಎರಡು ಸಾವು ಪ್ರಕರಣಗಳಿಂದ ಸೋಂಕಿತರ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಇದರಲ್ಲಿ 22 ಮಂದಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದರೆ ಇಬ್ಬರು ಸೋಂಕಿತರು ಅನ್ಯ ಕಾರಣದಿಂದ ಮೃತರಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಭಾರಿ ವೇಗದಲ್ಲಿ ಏರಿಕೆ ಕಾಣುತ್ತಿದೆ. ರವಿವಾರ ಒಂದೇ ದಿನ ಜಿಲ್ಲೆಯಲ್ಲಿ 147 ಮಂದಿ ಹೊಸ ಸೋಂಕಿತರ ಕಂಡುಬಂದಿದ್ದರು. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1234ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯ ಉಳ್ಳಾಲ ನಗರ ಸಭಾ ವ್ಯಾಪ್ತಿಯಲ್ಲಿ ರವಿವಾರ ಒಂದೇ ದಿನ 48 ಜನರಿಗೆ ಕೋವಿಡ್ -19 ಸೋಂಕು ದೃಢವಾಗಿತ್ತು. ರಾಂಡಮ್ ಪರೀಕ್ಷೆ ನಡೆಸಿದಾಗ ಹೆಚ್ಚಿನವರಲ್ಲಿ ಕೋವಿಡ್ -19 ಸೋಂಕು ದೃಢವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next