Advertisement

ಅಂಕೆ ಮೀರಿದ ಸೋಂಕು: ಮಂಗಳೂರಿನಲ್ಲಿ ಒಂದೇ ದಿನ ಮೂರು ಬಲಿ ಪಡೆದ ಕೋವಿಡ್

06:10 PM Jul 04, 2020 | keerthan |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಮರಣ ಮೃದಂಗ ಮುಂದುವರಿದಿದೆ. ಇಂದು ಒಂದೇ ದಿನ ಮೂರು ಕೋವಿಡ್ ಸೋಂಕಿತರು ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.

Advertisement

ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ ಇಂದು ಸೋಂಕಿಗೆ ಬಲಿಯಾಗಿರುವ ಬಗ್ಗೆ ವರದಿಯಾಗಿದೆ. ಇದರಿಂದ ಜಿಲ್ಲೆಯ ಸೋಂಕಿತರ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಶುಕ್ರವಾರ ಸಾವನ್ನಪ್ಪಿದ ಸುಳ್ಯದ ಮಹಿಳೆಗೆ ಕೋವಿಡ್-19 ಸೋಂಕು ತಾಗಿರುವುದು ಇಂದು ಬೆಳಿಗ್ಗೆ ದೃಢವಾಗಿತ್ತು. ಈಕೆ ಹೃದಯಾಘಾತದಿಂದ ಮರಣ ಹೊಂದಿದ್ದರು. ಇದಾದ ನಂತರ  ಈಗ ಮತ್ತೆ ಓರ್ವ ಮಹಿಳೆ ಮತ್ತು ಓರ್ವ ಪುರುಷ ಸೋಂಕಿಗೆ ಬಲಿಯಾಗಿರುವ ಬಗ್ಗೆ ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಶುಕ್ರವಾರ ಒಂದೇ ದಿನ ಜಿಲ್ಲೆಯಲ್ಲಿ 97 ಜನರಿಗೆ ಸೋಂಕು ದೃಢವಾಗಿತ್ತು. ಇದರಿಂದ ಜಿಲ್ಲೆಯ ಕೋವಿಡ್ -19 ಸೋಂಕಿತರ ಸಂಖ್ಯೆ 1012ಕ್ಕೆ ಏರಿಕೆ ಕಂಡಿತ್ತು. ಇದುವರೆಗೆ ಜಿಲ್ಲೆಯಲ್ಲಿ 20 ಮಂದಿ ಸೋಂಕಿತರು ಕೋವಿಡ್ ಕಾರಣದಿಂದ ಮೃತಪಟ್ಟಿದ್ದರೆ, ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next