Advertisement

ಕಲಬುರಗಿಯಲ್ಲಿ ಮತ್ತಿಬ್ಬರಿಗೆ ಕೋವಿಡ್-19: ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆ

06:23 PM May 01, 2020 | Team Udayavani |

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಮತ್ತಷ್ಟು ವ್ಯಾಪಿಸುತ್ತಿದ್ದು, ಶುಕ್ರವಾರ ಮತ್ತಿಬ್ಬರಿಗೆ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಮಹಾಮಾರಿ ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ‌

Advertisement

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ 55 ವರ್ಷದ ವ್ಯಕ್ತಿ (ಪಿ-587) ಮತ್ತು ಕೋವಿಡ್-19 ಸೋಂಕಿತ ಮಹಿಳೆ (ಪಿ-425)ಯಿಂದ ಸಂಪರ್ಕದಲ್ಲಿದ್ದ 20 ವರ್ಷದ ಯುವತಿ (ಪಿ-588) ಸೋಂಕು ತಗುಲಿರುವುದು ಖಚಿತವಾಗಿದೆ.

ಈ ಹಿಂದೆ 26 ವರ್ಷದ ಮಹಿಳೆ (ಪಿ-425) ಯಿಂದಲೇ ಐವರಿಗೆ ಸೋಂಕು ಹರಡಿತ್ತು. ‌ಇದೀಗ ಇನ್ನೋರ್ವ ವ್ಯಕ್ತಿಗೂ ಸೋಂಕು ಹಬ್ಬಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 24 ಜನರಿಗೆ ಸೋಂಕು ತಾಗಿರುವುದು ಧೃಢವಾಗಿದೆ. ಇದರಿಂದ ರಾಜ್ಯದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ. ಇದರಲ್ಲಿ 251 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 22 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಮತ್ತು ಓರ್ವ ಸೋಂಕಿತ ಕೋವಿಡ್-19 ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next