ಶಿವಮೊಗ್ಗ: ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಮತ್ತೆರಡು ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ. ಭದ್ರಾವತಿಯಲ್ಲಿ ಒಂದು ಪ್ರಕರಣ ಹಾಗೂ ಹೊಸನಗರ ತಾಲೂಕಿನಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.
ಇಂದು ಸೋಂಕು ದೃಢವಾದ ಇಬ್ಬರೂ ಮಹಾರಾಷ್ಟ್ರದ ಮುಂಬೈನಿಂದ ಶಿವಮೊಗ್ಗ ಜಿಲ್ಲೆಗೆ ಆಗಮಿಸಿದ್ದರು. ಸದ್ಯ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ
ಈ ಎರಡು ಪ್ರಕರಣಗಳನ್ನು ಸೇರಿ ಶಿವಮೊಗ್ಗದಲ್ಲಿ ಇದುವರೆಗೆ ಒಟ್ಟು 14 ಕೋವಿಡ್-19 ಪ್ರಕರಣಗಳು ಪತ್ತೆಯಾದಂತಾಗಿದೆ.
ಸದ್ಯ ಹೊರರಾಜ್ಯದಿಂದ ಬಂದಿರುವವರ ವೈದ್ಯಕೀಯ ತಪಾಸಣೆಯನ್ನು ಜಿಲ್ಲಾಡಳಿತ ಚುರುಕುಗೊಳಿಸಿದೆ. ಹೊರರಾಜ್ಯದಿಂದ ಬಂದಿರುವವರನ್ನು ಜಿಲ್ಲಾಡಳಿತ ಇನ್ಸ್ ಟಿಟ್ಯೂಷನಲ್ ಕ್ವಾರಂಟೈನ್ ನಲ್ಲಿದೆ.
ರಾಜ್ಯದಲ್ಲಿ ಇಂದು 54 ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1146ಕ್ಕೆ ಏರಿದೆ. ಅದರಲ್ಲಿ 37 ಮಂದಿ ಸಾವನ್ನಪ್ಪಿದ್ದು, 497 ಮಂದಿ ಗುಣಮುಖರಾಗಿದ್ದಾರೆ.