Advertisement

ಕೋವಿಡ್-19: ಬೆಳಗಾವಿಯಲ್ಲಿ ಮತ್ತೆ ಇಬ್ಬರು ಗುಣಮುಖ   

03:04 PM May 07, 2020 | Team Udayavani |

ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದವರ ಪೈಕಿ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

Advertisement

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರೇಬಾಗೇವಾಡಿಯ ಪಿ-284 ಮತ್ತು ಕುಡಚಿಯ ಪಿ-300 ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 74 ಜನರಲ್ಲಿ ಸೋಂಕು ಪತ್ತೆಯಾಗಿದ್ದು ಇದೀಗ ಒಟ್ಟಾರೆ 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.

ರಾಜ್ಯದಲ್ಲಿ ಇಂದು ಎಂಟು ಜನರಿಗೆ ಸೋಂಕು ದೃಢವಾಗಿದ್ದು, ಬೆಳಗಾವಿಯ ಹಿರೇಬಾಗೇವಾಡಿದ ಬಾಲಕಿಗೂ ಸೋಂಕು ತಾಗಿತ್ತು. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 700 ದಾಟಿದೆ.

Advertisement

Udayavani is now on Telegram. Click here to join our channel and stay updated with the latest news.

Next