Advertisement

ಬೆಳಗಾವಿ ಜಿಲ್ಲೆಯ ಮತ್ತಿಬ್ಬರು ಸೋಂಕಿತರು ಗುಣಮುಖ

03:37 PM Apr 21, 2020 | keerthan |

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಬೆಳಗಾವಿಗರಿಗೆ ಮತ್ತೊಂದು ಸಂತಸದ ಸುದ್ದಿ ಸಿಕ್ಕಿದ್ದು, ಪಾಸಿಟಿವ್ ಸೋಂಕಿತರಲ್ಲಿ ಇನ್ನಿಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

ಹಿರೆಬಾಗೇವಾಡಿಯ ಒಬ್ಬ ಹಾಗೂ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಒಬ್ಬ ವ್ಯಕ್ತಿ ಸೇರಿದಂತೆ ಇಬ್ಬರ ವರದಿಗಳು ನೆಗೆಟಿವ್ ಬಂದಿದ್ದು, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಜಿಲ್ಲೆಯಲ್ಲಿ ಸದ್ಯ 42 ಜನ ಸೋಂಕಿತರಲ್ಲಿ ಕಳೆದ ಮೂರು ದಿನಗಳ ಹಿಮದೆ 70 ವರ್ಷದ ವೃದ್ಧ ಗುಣಮುಖರಾಗಿ ಬಿಡುಗಡೆ ಹೊಂದಿದ ಬೆನ್ನಲ್ಲೇ ಇನ್ನಿಬ್ಬರ ವರದಿಗಳು ನೆಗೆಟಿವ್ ಬಂದಿದ್ದರಿಂದ ಬೆಳಗಾವಿಯಲ್ಲಿ ಸಮಾಧಾನದ ವಾತಾವರಣ ನಿರ್ಮಾಣವಾಗಿದೆ. ಒಟ್ಟು ಮೂರು ಜನ ಗುಣಮುಖರಾಗಿ ಬಿಡುಗಡೆ ಆದಂತಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next