Advertisement

ಉಡುಪಿಯಲ್ಲಿ ಮತ್ತಿಬ್ಬರಿಗೆ ಕೋವಿಡ್-19 ಪಾಸಿಟಿವ್

10:55 AM Apr 08, 2020 | keerthan |

ಉಡುಪಿ: ಕೋವಿಡ್ -19 ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಉಡುಪಿಯಲ್ಲಿ ಒಟ್ಟು ಮೂರು ಪ್ರಕರಣಗಳು ದೃಢವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

Advertisement

ಉಡುಪಿ ಉಸ್ತುವಾರಿ ಸಚುವರೂ ಆಗಿರುವ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡುತ್ತಿರುವ ವಿಡಿಯೋವೊಂದನ್ನು ಜಿಲ್ಲಾಧಿಕಾರಿ ಜಗದೀಶ್ ಅವರು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದು, ಆ ವಿಡಿಯೋದಲ್ಲಿ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿ ಒಟ್ಟು ಮೂರು ಕೋವಿಡ್-19 ಪಾಸಿಟಿವ್ ಪ್ರಕರಣಗಳಿದ್ದು ಯಾರೂ ಆತಂಕ ಪಡುವ ಅವಶ್ಯಕತೆಯಿಲ್ಲ. ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮೇಲೂ ನಿಗಾ ಇಡಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಈ ಮೊದಲು ಕೆಲ ದಿನಗಳ ಹಿಂದೆ ಉಡುಪಿಯಲ್ಲಿ ಒಂದು ಕೋವಿಡ್ 19 ಪಾಸಿಟಿವ್ ಪ್ರಕರಣ ದೃಢವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next