Advertisement

ಭೂಮಿ ನುಂಗುವ ದಂಧೆ ಬೆಳೆಯಲು ಎರಡು ರಾಷ್ಟ್ರೀಯ ಪಕ್ಷಗಳು ಕಾರಣ: HDK ವಾಗ್ದಾಳಿ

12:27 PM Mar 12, 2021 | Team Udayavani |

ಬೆಂಗಳೂರು: ಇಂದು ಭೂಮಾಫಿಯಾದಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿರುವವರು ಯಾರು? ಪಕ್ಷಗಳ ಹಿಂಬಾಲಕರು, ಬಾಲಬಡುಕರೇ ಅಲ್ಲವೇ? ಅವರಿಗೆ ಪ್ರೋತ್ಸಾಹ ಕೊಡುವಾಗ ಕೊಟ್ಟು ಈಗ ‘ನಿಯಂತ್ರಿಸಲಾಗುತ್ತಿಲ್ಲ,’ ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ. ಇಂಥ ಮಾತುಗಳು ಭೂಮಾಫಿಯಾಕ್ಕೆ ಪ್ರೇರಕ. ಭೂಮಿ ನುಂಗುವ ದಂಧೆ ಬೆಳೆಯಲು ಎರಡೂ ರಾಷ್ಟ್ರೀಯ ಪಕ್ಷಗಳ ಪಾಲು ಸಮಾನ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Advertisement

ಕಂದಾಯ ಸಚಿವ ಆರ್. ಆಶೋಕ್  ಅವರ ಉತ್ತರವೊಂದನ್ನು ಗಮನಿಸಿದೆ. ‘ಭೂ ಮಾಫಿಯಾ ವಿರುದ್ಧ ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿ ಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ’ ಎಂದು ಸಚಿವರು ಹೇಳಿದ್ದಾರೆ. ವ್ಯವಸ್ಥೆ  ಹದಗೆಟ್ಟಿರುವುದರ ಬಗ್ಗೆ ಮಾತನಾಡಿರುವ ಸಚಿವರು, ಅದರ ಹಿಂದಿನ ಕಾರಣವನ್ನೂ ಪ್ರಸ್ತಾಪಿಸಿದಿದ್ದರೆ ಚೆನ್ನಾಗಿರುತ್ತಿತ್ತು ಎಂದು ತಿಳಿಸಿದರು.

ಇದನ್ನೂ ಓದಿ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500 ಅಂಕ ಏರಿಕೆ, 15,000 ಗಡಿ ದಾಟಿದ ನಿಫ್ಟಿ

‘ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ,’ ಎಂದೂ ಸಚಿವರು ಹೇಳಿದ್ದಾರೆ. ಅಧಿಕಾರಿಗಳು ಈ ಮಟ್ಟಿನ ಭಂಡತನ ತೋರಲು ರಾಜಕಾರಣಿಗಳು ಹುಟ್ಟುಹಾಕಿದ ವಿಷಮ ವ್ಯವಸ್ಥೆಯೇ ಕಾರಣ. ಸರ್ಕಾರ ಅಸಹಾಯಕತೆ ಪ್ರದರ್ಶಿಸಿ, ದುರ್ವ್ಯವಸ್ಥೆ ಪ್ರೋತ್ಸಾಹಿಸದೇ ಶುದ್ಧೀಕರಣ ನಡೆಸಬೇಕು.

ಒಂದು ಅವ್ಯವಸ್ಥೆ ವಿರುದ್ಧ ಸರ್ಕಾರ ಕಠಿಣ ನೀತಿ ರೂಪಿಸಿ ಅದನ್ನು ಜಾರಿ ಮಾಡಲು ಹೊರಟು ನಿಂತರೆ ಯಾವ ಮಾಫಿಯಾ ಏನು ಮಾಡಲು ಸಾಧ್ಯ? ಅದಕ್ಕೆ ಇಚ್ಛಾಶಕ್ತಿ ಬೇಕಷ್ಟೆ. ಸ್ವಹಿತಾಸಕ್ತಿ ಹೊಂದಿರುವವರು ಮಾತ್ರ ವ್ಯವಸ್ಥೆ ಸರಿಪಡಿಸಲಾಗದ ಮಾತಾಡುತ್ತಾರೆ. ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು? ಎಂದು ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಇದನ್ನೂ ಓದಿ:  ಗ್ರಾಹಕರೇ ಗಮನಿಸಿ: Bank ಕೆಲಸ ಇಂದೇ(ಮಾ.12) ಮುಗಿಸಿ;ವಾರಾಂತ್ಯಕ್ಕೆ ಹಣ ತೆಗೆದಿಟ್ಟುಕೊಳ್ಳಿ!

Advertisement

Udayavani is now on Telegram. Click here to join our channel and stay updated with the latest news.

Next