Advertisement

ಇಬ್ಬರು ನಕ್ಸಲರ ಹತ್ಯೆ

09:15 AM Nov 06, 2019 | Hari Prasad |

ರಾಯ್ಪುರ: ಛತ್ತೀಸ್‌ಗಢ‌ದ ದಂತೇವಾಡ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮುಂಗಾ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಬೆಳಗ್ಗೆ 11:30ಕ್ಕೆ ಜಿಲ್ಲಾ ಮೀಸಲು ಪಡೆ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಆರಂಭಿಸಿತು.

Advertisement

ಈ ವೇಳೆ ನಕ್ಸಲರು ಪೊಲೀಸರ ಮೇಲೆ ದಾಳಿ ಆರಂಭಿಸಿದರು. ಆಗ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ. ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next