Advertisement

ಪ್ರಮಾಣ ವಚನ ಸ್ವೀಕರಿಸಿದ ಉಪಚುನಾವಣೆಯಲ್ಲಿ ಗೆದ್ದ ಇಬ್ಬರು ಶಾಸಕರು

12:51 PM Jun 08, 2021 | keerthan |

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಸಭೆಯ ಉಪಚುನಾವಣೆಯಲ್ಲಿ ಗೆದ್ದ ಇಬ್ಬರು ಶಾಸಕರಾದ ಬಸನಗೌಡ ತುರವಿಹಾಳ್ ಮತ್ತು ಶರಣು ಸಲಗಾರ ಇಂದು ಪ್ರಮಾಣ ವಚನ ಸ್ವೀಕರಿಸಿದರು.

Advertisement

ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು. ಇಬ್ಬರು ಶಾಸಕರು ಸತ್ಯ , ನ್ಯಾಯ ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಶರಣು ಸಲಗಾರಗೆ ಈ ವೇಳೆ ಉಪ ಮುಖ್ಯಮಂತ್ರಿ ಲಕ್ಷಣ ಸವದಿ, ಸಚಿವ ಪ್ರಭು ಚೌಹಾಣ್, ಸಂಸದರಾದ ಭಗವಂತ ಖುಬಾ ಹಾಗೂ ಮತ್ತಿತರರು ಸಾಥ್ ನೀಡಿದರು.

ಇದನ್ನೂ ಓದಿ:ಸಿಎಂ ಸ್ಥಾನದ ಬಗ್ಗೆ ಮಾತಾಡುವುವವರು ಅನಾಗರಿಕರು: ಸಂಸದ ಎ.ನಾರಾಯಣಸ್ವಾಮಿ

ಬಸವಕಲ್ಯಾಣ ವಿಧಾನಸಭಾಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶರಣು ಸಲಗಾರ ಜಯ ಸಾಧಿಸಿದ್ದರೆ, ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವೇಗೌಡ ತುರವಿಹಾಳ್ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ್ ಅವರನ್ನು ಸೋಲಿದ್ದರು.

Advertisement

ಶಾಸಕ ಬಸವನಗೌಡ ತುರುವಿಹಾಳ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸನ್ಮಾನಿಸಿದರು. ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಧೃವನಾರಾಯಣ್, ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜು, ಶಾಸಕರಾದ ಹುಲಗೇರಿ, ಬಸವನಗೌಡ ದದ್ದಲ್, ಮಾಜಿ ಸಂಸದ, ಜಿಲ್ಲಾದ್ಯಕ್ಷ ಬಿ.ವಿ. ನಾಯಕ್, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಜಿಲ್ಲಾಧ್ಯಕ್ಷ ವಸಂತ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next