Advertisement

ವಿಧಾನ ಪರಿಷತ್‌ಗೆ ಕಾಂಗ್ರೆಸ್‌ನಿಂದ ಇಬ್ಬರ ನಾಮನಿರ್ದೇಶನ?

06:30 AM Sep 27, 2018 | |

ಬೆಂಗಳೂರು:ರಾಜ್ಯ ಸರ್ಕಾರದಿಂದ ವಿಧಾನಪರಿಷತ್‌ನ ಮೂರು ಸ್ಥಾನಗಳಿಗೆ ನಾಮಕರಣ ಮಾಡಬೇಕಿದ್ದು ಕಾಂಗ್ರೆಸ್‌ ಕೋಟಾದಡಿ ಪ್ರಕಾಶ್‌ ರಾಠೊಡ್‌ ಹಾಗೂ ಯು.ಬಿ. ವೆಂಕಟೇಶ್‌ ಅವರನ್ನು ನಾಮ ನಿರ್ದೇಶನ ಮಾಡಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

Advertisement

ಇತ್ತೀಚೆಗೆ ದೆಹಲಿಯಲ್ಲಿ ಹೈ ಕಮಾಂಡ್‌ ನಾಯಕರ ಜೊತೆ ನಡೆದ ಸಭೆಯಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ಹೆಸರುಗಳು ಕೇಳಿ ಬಂದಿದ್ದವು. ಆದರೆ, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕಾಗಿ ದುಡಿದವರಿಗೆ ಆದ್ಯತೆ ನೀಡಿದರೆ, ಹೆಚ್ಚಿನ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ಸ್ಥಳೀಯ ಮಟ್ಟದಲ್ಲಿ ವ್ಯಕ್ತವಾಗಿದೆ. 

ಹೀಗಾಗಿ, ಕ್ರೀಡಾ ವಲಯದಿಂದ ರಾಥೋಡ್‌ ಹಾಗೂ ಶಿಕ್ಷಣ ವಲಯದಿಂದ ವೆಂಕಟೇಶ್‌ ಅವರಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷದ ಜೆಡಿಎಸ್‌ಗೂ ಒಂದು ಸ್ಥಾನ ದೊರೆಯಲಿದ್ದು ಆ ಸ್ಥಾನಕ್ಕೆ ಐದಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next