Advertisement
ಶಿಬಿರದಲ್ಲಿ ನಾಪತ್ತೆಯಾಗಿದ್ದ ಐದು ಸೈನಿಕರ ಪೈಕಿ ಇಬ್ಬರನ್ನು ರಕ್ಷಿಸಲಾಗಿತ್ತು.ಅನಿರೀಕ್ಷಿತ ಹಿಮ ವರ್ಷ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಅರುಣಾಚಲ ಪ್ರದೇಶ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಜಮ್ಮು ಕಾಶ್ಮೀರದಲ್ಲಿ ಕಳೆದ 3 ದಿನ ಗಳಿಂದ ಹಿಮವರ್ಷ ಹಾಗೂ ಧಾರಾ ಕಾರ ಮಳೆಯಾಗು ತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ಜೇಲಂ ಹಾಗೂ ಥಾವಿ ನದಿಗಳು ಉಕ್ಕಿ ಹರಿಯುತ್ತಿದ್ದು, ಅಪಾ ಯದ ಮಟ್ಟ ತಲುಪುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮಧ್ಯ ಹಾಗೂ ದಕ್ಷಿಣ ಕಾಶ್ಮೀರದಲ್ಲಿ ಪ್ರವಾಹದ ಎಚ್ಚರಿಕೆಯನ್ನೂ ಹೊರಡಿಸಿದೆ. ಕೊಕೆರ್‌ನಾಗ್‌ನಲ್ಲಿ ಕಾರೊಂದು ಸ್ಕಿಡ್ ಆಗಿ ನದಿಗೆ ಬಿದ್ದ ಪರಿಣಾಮ ಇಬ್ಬರು ನಾಪತ್ತೆಯಾಗಿದ್ದಾರೆ.