Advertisement

ವಾಹನ ಚಾಲಕರಿಗೆ ಹಣಕ್ಕಾಗಿ ಕಿರುಕುಳದ ಆರೋಪ : ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು

11:08 PM May 21, 2021 | sudhir |

ವಿಜಯಪುರ: ನಗರದ ಅಥಣಿ ರಸ್ತೆಯಲ್ಲಿ ಸಂಚರಿಸುವ ಸರಕು ಸಾಗಣೆ ವಾಹನಗಳನ್ನು ಅನಗತ್ಯ ನಿಲ್ಲಿಸಿ, ಚಾಲಕರಿಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಪೊಲೀಸ್ ಇಲಾಖೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದೆ.

Advertisement

ಹೈವೇ ಪ್ಯಾಟ್ರೋಲಿಂಗ್  ವಾಹನದಲ್ಲಿ ಕಾರ್ಯ ನಿರ್ವಹಿಸುವ ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು ಎಸ್ಪಿ ಅನುಪಮ ಅಗರವಾಲ ಅಮಾನತು ಮಾಡಿದ್ದಾರೆ.

ಅಮಾನತು ಆದವರನ್ನು ತಿಕೋಟಾ ಪೊಲೀಸ್‌ ಠಾಣೆಯ ಎಎಸ್‌ಐ ಎಂ.ಎಸ್‌.ವಾಲಿಕಾರ ಹಾಗೂ ವಿಜಯಪುರ ಡಿಎಆರ್‌ ಘಟಕದ ಎ.ಎಸ್‌.ಐ ಯು.ಬಿ.ಚಿಗರೊಳ್ಳಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ :ಚಿತ್ರದುರ್ಗ ಜಿಲ್ಲೆಯಲ್ಲಿ 21 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ

ಈ ಇಬ್ಬರು ಅಧಿಕಾರಿಗಳು ಲಾರಿ ಚಾಲಕರಿಂದ ಹಣ ವಸೂಲಿ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹೀಗಾಗಿ ಪರಿಶೀಲನೆ ನಡೆಸಿದ ಪೊಲೀಸ್ ಇಲಾಖೆ, ಇಲಾಖಾ ವಿಚಾರಣೆ ಬಾಕಿ ಇರಿಸಿ ಈ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಅಮಾನತು ಕ್ರಮಕೈಗೊಂಡಿದ್ದಾಗಿ ಎಸ್ಪಿ ಅಗರವಾಲ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next