ಶ್ರೀನಗರ: ವರ್ಷದ ಮೊದಲ ದಿನದಂದೇ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದು, ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾದಲ್ಲಿ ಬುಧವಾರ ಬೆಳಿಗ್ಗೆ ಘಟನೆ ನಡೆದಿದೆ.
ರಜೌರಿಯನ ನೌಶೆರಾದಲ್ಲಿ ಉಗ್ರರು ಅಡಗಿರುವ ಮಾಹಿತಿ ತಿಳಿದು ಸೇನಾ ಪಡೆಗಳು ಕಾರ್ಯಾಚರಣೆಗಳಿಗಿದ್ದವು. ಆ ಸಮಯದಲ್ಲಿ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ಧಾವೆ. ಈ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಭಾರತೀಯ ಸೇನೆಯೂ ದಾಳಿ ಮುಂದುವರಿಸಿದೆ ಎನ್ನಲಾಗಿದೆ. ಕಣಿವೆ ಪ್ರದೇಶದಲ್ಲಿ ಸುಮಾರು 250 ಉಗ್ರರು ಸಕ್ರೀಯರಾಗಿದ್ದು, ಇದರಲ್ಲಿ ಹೆಚ್ಚಿನವರು ಸ್ಥಳೀಯರು ಎಂದು ಜಮ್ಮು ಕಾಶ್ಮೀರದ ಡಿಜಿಪಿ ದಿಲ್ ಬಾಘ್ ಸಿಂಗ್ ಹೇಳಿದ್ದಾರೆ.