Advertisement

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಇಬ್ಬರು ಯೋಧರು ಹುತಾತ್ಮ

04:37 PM Jul 12, 2017 | Sharanya Alva |

ಜಮ್ಮು-ಕಾಶ್ಮೀರ: ಅಮರನಾಥ ಯಾತ್ರಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಿ 7 ಮಂದಿಯನ್ನು ಹತ್ಯೆಗೈದಿದ್ದ ಬೆನ್ನಲ್ಲೇ ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಉಗ್ರರು ನಡೆಸಿದ ದಾಳಿಗೆ ಇಬ್ಬರು ಯೋಧರು ಹುತಾತ್ಮರಾದ ಘಟನೆ ಬುಧವಾರ ನಡೆದಿದೆ.

Advertisement

ಸೇನೆಯ ಯೋಧರನ್ನೇ ಗುರಿಯಾಗಿರಿಸಿಕೊಂಡು ಉಗ್ರರು ದಾಳಿ ನಡೆಸಿರುವುದಾಗಿ ಮೂಲಗಳು ತಿಳಿಸಿವೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಮತ್ತೊಂದೆಡೆ ಜಮ್ಮು ಕಾಶ್ಮೀರದ ಬದ್ಗಾಮ್ ಪ್ರದೇಶದಲ್ಲಿ ಉಗ್ರರು ಠಿಕಾಣಿ ಹೂಡಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಭದ್ರಾತಾಪಡೆಗಳ ಪ್ರತಿದಾಳಿಗೆ ಮೂವರು ಉಗ್ರರು ಬಲಿಯಾಗಿದ್ದರು.
 

Advertisement

Udayavani is now on Telegram. Click here to join our channel and stay updated with the latest news.

Next