Advertisement

Vitla ವಿದ್ಯಾರ್ಥಿನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಪತ್ತೆ

10:56 PM Aug 22, 2023 | Team Udayavani |

ವಿಟ್ಲ: ಇಲ್ಲಿನ ಪರಿಶಿಷ್ಟ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ಸೋಮವಾರ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಮಂಗಳವಾರ ಬೆಳಗ್ಗೆ ಪುತ್ತೂರಿನಲ್ಲಿ ಪತ್ತೆಯಾಗಿದ್ದಾರೆ.

Advertisement

ದೀಕ್ಷಿತ್‌(15) ಮತ್ತು ಗಗನ್‌(14) ಪತ್ತೆಯಾಗಿರುವ ವಿದ್ಯಾರ್ಥಿಗಳು. ಇವರು ಆ. 21ರಂದು ವಿದ್ಯಾರ್ಥಿ ನಿಲಯದಿಂದ ತೆರಳಿದವರು ಶಾಲೆಗೂ ಹೋಗದೇ ವಾಪಸ್‌ ವಿದ್ಯಾರ್ಥಿ ನಿಲಯಕ್ಕೂ ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಪ್ರಮೀಳಾ ವಿಟ್ಲ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ವಿಟ್ಲ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಮಂಗಳವಾರ ಬೆಳಗ್ಗೆ ಪುತ್ತೂರು ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಪತ್ತೆ ಹಚ್ಚಿದ್ದಾರೆ. ಹಾಸ್ಟೆಲ್‌ನಲ್ಲಿ ನಿಲ್ಲಲು ಇಷ್ಟವಾಗದ ಕಾರಣ ದೀಕ್ಷಿತ್‌ ಮತ್ತು ಗಗನ್‌ ಮನೆ ಕಡೆಗೆ ಹೊರಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿಟ್ಲ ಠಾಣೆಗೆ ಕರೆ ತಂದ ಪೊಲೀಸರು ಅವರ ಮನವೊಲಿಸಿ ಮತ್ತೆ ಹಾಸ್ಟೆಲ್‌ಗೆ ಕಳುಹಿಸಿಕೊಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next