Advertisement

ಪಶ್ಚಿಮ ಬಂಗಾಳದಲ್ಲಿ ಅಲ್ ಖೈದಾ ಶಂಕಿತ ಸದಸ್ಯರಿಬ್ಬರ ಬಂಧನ

01:56 PM Aug 18, 2022 | Team Udayavani |

ಕೋಲ್ಕತ: ಉತ್ತರ 24 ಪರಗಣ ಜಿಲ್ಲೆಯಿಂದ ಅಲ್ ಖೈದಾ ಭಾರತೀಯ-ಉಪಖಂಡ (ಎಕ್ಯೂಐಎಸ್‌) ಸಂಘಟನೆಯ ಇಬ್ಬರು ಶಂಕಿತ ಸದಸ್ಯರನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಸುಳಿವಿನ ಮೇರೆಗೆ ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆಯ ಅಧಿಕಾರಿಗಳು ಶಾಸನ್ ಪೊಲೀಸ್ ಠಾಣಾ ವ್ಯಾಪ್ತಿಯ ಖರಿಬರಿ ಪ್ರದೇಶದಲ್ಲಿ ಬುಧವಾರ ರಾತ್ರಿ ದಾಳಿ ನಡೆಸಿ ಇಬ್ಬರನ್ನು ಭಯೋತ್ಪಾದಕ ಸಂಘಟನೆಯೊಂದಿಗೆ ತೊಡಗಿಸಿಕೊಂಡಿದ್ದಕ್ಕಾಗಿ ಬಂಧಿಸಿದ್ದಾರೆ. ಒಬ್ಬ ದಕ್ಷಿಣ ದಿನಾಜ್‌ಪುರ ಜಿಲ್ಲೆಯ ಗಂಗಾರಾಮ್‌ಪುರ ನಿವಾಸಿ ಎಂದು ಗುರುತಿಸಲಾಗಿದ್ದು, ಮತ್ತೊಬ್ಬಹೂಗ್ಲಿಯ ಅರಾಂಬಾಗ್‌ನವನು. ದಾಳಿಯ ಸಮಯದಲ್ಲಿ ಹಲವಾರು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

“ಎಕ್ಯೂಐಎಸ್‌ನಲ್ಲಿ ಭಾಗಿಯಾಗಿರುವ ಕಾರಣ ಇಬ್ಬರನ್ನೂ ಬಂಧಿಸಲಾಗಿದೆ. ಭಾರತದ ವಿರುದ್ಧ ಯುದ್ಧ ಸಾರುವ ಅತ್ಯಂತ ಮೂಲಭೂತವಾದ ಚಿಂತನೆಗಳನ್ನು ಒಳಗೊಂಡಿರುವ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರ ವಿರುದ್ಧ ನಿರ್ದಿಷ್ಟ ಪ್ರಕರಣವನ್ನು ಪ್ರಾರಂಭಿಸಲಾಗುತ್ತಿದೆ” ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

ಇಬ್ಬರನ್ನು ವಿಚಾರಣೆಗೊಳಪಡಿಸಿದ ನಂತರ, ಎಕ್ಯೂಐಎಸ್‌ನ ಕನಿಷ್ಠ 17 ಸದಸ್ಯರು ಈ ಪ್ರದೇಶದಲ್ಲಿ ಸಕ್ರಿಯರಾಗಿದ್ದಾರೆ ಎಂದು ಪೊಲೀಸರು ತಿಳಿದುಕೊಂಡಿದ್ದು, ಇಬ್ಬರನ್ನು ಗುರುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next