Advertisement

ಒಂದೇ ಕೆಲಸಕ್ಕೆ ಎರಡು ಟೆಂಡರ್‌: ಕಾಬಾ

12:49 PM Apr 09, 2022 | Team Udayavani |

ಅಫಜಲಪುರ: ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ 2021-22ನೇ ಸಾಲಿನ ಲೋಕೋಪಯೋಗಿ ಇಲಾಖೆಯ ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಅಡಿ 18 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿ ಕೈಗೊಳ್ಳದೇ ಅನುದಾನ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಅಭಿವೃದ್ಧಿ ಯೋಜನೆ (ಕೆಡಿಪಿ) ಮಾಜಿ ಸದಸ್ಯ ಡಾ| ಕೇಶವ ಕಾಬಾ ಆರೋಪಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊನ್ನಕಿರಣಗಿ ಗ್ರಾಮದ ಶಂಕರ ಡೋರ ಮನೆಯಿಂದ ಸರ್ಕಾರಿ ಪ್ರಾಥಮಿಕ ಶಾಲೆ ವರೆಗೆ ಸಿಸಿ ರಸ್ತೆ ಕಾಮಗಾರಿ, ಚರಂಡಿ ನಿರ್ಮಾಣ ಮಾಡಲಾಗಿತ್ತು. ಆದರೂ ಕೆಲವರು ಸುಳ್ಳು ದಾಖಲೆ ಸೃಷ್ಟಿಸಿ 18 ಲಕ್ಷ ರೂ. ವೆಚ್ಚದ ಯಾವುದೇ ಕಾಮಗಾರಿ ಕೈಗೊಳ್ಳದೇ ಹಣ ಲಪಟಾಯಿಸಿದ್ದಾರೆ. ಈ ಕುರಿತು ಅಧಿಕಾರಿಗಳು ಮಾಹಿತಿ ನೀಡುತ್ತಿಲ್ಲ ಎಂದು ದೂರಿದರು.

ಸಂಬಂಧಪಟ್ಟವರು ಕೂಡಲೇ ಕಾಮಗಾರಿ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ದುರುಪಯೋಗವಾದ ಅನುದಾನವನ್ನು ಮರಳಿ ಕಟ್ಟಿಸಿ, ಗ್ರಾಮದ ಕನಕದಾಸ ಕಟ್ಟೆಯಿಂದ ಮರಗಮ್ಮ ದೇವಸ್ಥಾನಕ್ಕೆ ಹೋಗುವ ಹಳ್ಳದ ವರೆಗೆ ರಸ್ತೆ ಮತ್ತು ಚರಂಡಿ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ವಿಶ್ವನಾಥ ಹಿರೇಮಠ, ಜೆಟ್ಟೆಪ್ಪ ಪೂಜಾರಿ, ಶಿವಕುಮಾರ ಜುಲ್ಪಿ, ರವಿ ಪೂಜಾರಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next