Advertisement

ಗುಂಡ್ಲುಪೇಟೆ: ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಶಂಕಿತ ಉಗ್ರರ ಬಂಧನ

09:53 AM Jan 13, 2020 | Team Udayavani |

ಚಾಮರಾಜನಗರ: ಕೇರಳ ಮೂಲದ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಮಾಹಿತಿಯನ್ನಾಧರಿಸಿ ತಾಲೂಕಿನ ಗುಂಡ್ಲುಪೇಟೆಯಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ.

Advertisement

ಖಚಿತ ಮಾಹಿತಿಯ ಆಧಾರದ ಚಾಮರಾಜನಗರ ಜಿಲ್ಲಾ ಪೊಲೀಸರು, ಭಯೋತ್ಪಾದಕ ನಿಗ್ರಹ ದಳ ಹಾಗೂ ಅಂತರಿಕ ಭದ್ರತಾ ವಿಭಾಗಗಳ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಶನಿವಾರ ರಾತ್ರಿ ಶಂಕಿತ‌ ಉಗ್ರರನ್ನು ಬಂಧಿಸಲಾಗಿದೆ ಎಂದು‌ ಪೊಲೀಸ್ ಮೂಲಗಳು ಖಚಿತ‌ ಪಡಿಸಿವೆ.

ಬಂಧಿತ ಇಬ್ಬರೂ ಸ್ಥಳೀಯ ನಿವಾಸಿಗಳೆಂದ ಮೂಲಗಳು ತಿಳಿಸಿದೆ. ಕೇರಳ ಮೂಲದ ಉಗ್ರರೊಂದಿಗೆ ಇವರಿಬ್ಬರು ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ದೊರೆತಿದೆ.

ಬಂಧಿತರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ‌ . ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸರು ಬೆಂಗಳೂರಿಗೆ ಕರೆದೊಯ್ಯಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next