Advertisement

ಶೋಪಿಯಾನ್‌ನಲ್ಲಿ ಬೆಳ್ಳಂಬೆಳಗ್ಗೆ ನಾಲ್ವರು ಉಗ್ರರು ಫಿನಿಶ್‌

09:48 AM Jun 24, 2019 | Vishnu Das |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ದಾರಮ್‌ದೋರಾ ಪ್ರದೇಶದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಭಾರಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನಾ ಪಡೆಗಳು ನಸುಕಿನ ವೇಳೆ  ಜಂಟಿ ಕಾರ್ಯಾಚರಣೆ ನಡೆಸಿದ್ದು, ಗಂಟೆಗಳ ಕಾಲ ನಡೆದ ಭಾರಿ ಗುಂಡಿನ ಕಾಳಗ ಅಂತ್ಯಗೊಂಡಿದ್ದು, ನಾಲ್ವರು ಉಗ್ರರ ಶವಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಹತ ಉಗ್ರರು ಯಾವ ಸಂಘಟನೆಗೆ ಸೇರಿದವರು ಎನ್ನುವ ವಿಚಾರ ಇನ್ನಷ್ಟೇ ತಿಳಿದು ಬರಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next