ನವದೆಹಲಿ: ಜಮ್ಮು-ಕಾಶ್ಮೀರದ ಶ್ರೀನಗರ ಜಿಲ್ಲೆಯ ಖೋನ್ ಮೋಹ್ ಪ್ರದೇಶದಲ್ಲಿ ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಸೋಮವಾರ(ಮೇ 17) ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಚಾಕೊಲೆಟ್ ತಿನ್ನಲು ಎಷ್ಟು ಸಿಹಿಯೋ, ಜಾಸ್ತಿಯಾದ್ರೆ ಆರೋಗ್ಯಕ್ಕೆ ಅಷ್ಟೇ ಕಹಿ..!
ಸುಮಾರು ಐದು ಗಂಟೆಗಳ ಕಾಲ ನಡೆದ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಸ್ಥಳೀಯ ನಿವಾಸಿಗಳು, ಅಲ್ ಬದರ್ ಭಯೋತ್ಪಾದಕ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಹತ್ಯೆಗೀಡಾಗಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಎನ್ ಕೌಂಟರ್ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದೆ. ಖೋನ್ ಮೋಹ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿತ್ತು.
ಭದ್ರತಾ ಪಡೆ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಸುಮಾರು ಐದು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿತ್ತು. ಬಳಿಕ ನಡೆದ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.