ಜಮ್ಮು: ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಸಾವನ್ನಪ್ಪಿರುವ ಘಟನೆ ಸೋಮವಾರ (ಆಗಸ್ಟ್ 17, 2020) ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಭದ್ರತಾ ಪಡೆಯ ಚೆಕ್ ಪಾಯಿಂಟ್ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿರುವ ಘಟನೆ ಇದಕ್ಕೂ ಮೊದಲು ನಡೆದಿತ್ತು. ಪೊಲೀಸರ ವರದಿ ಪ್ರಕಾರ ಭದ್ರತಾ ಪಡೆಯ ಮೇಲೆ ದಾಳಿ ನಡೆಸಿದ ಉಗ್ರನೊಬ್ಬ ಕ್ರೀರಿ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿರುವುದಾಗಿ ತಿಳಿಸಿದೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರರು ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಸಿಆರ್ ಪಿಎಫ್ ಮತ್ತು ಜಮ್ಮು-ಕಾಶ್ಮೀರ ಪೊಲೀಸರ ಚೆಕ್ ಪಾಯಿಂಟ್ ಮೇಲೆ ಉಗ್ರರು ದಾಳಿ ನಡೆಸಿದ ನಂತರ ಭದ್ರತಾ ಪಡೆ ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು.