ಜಮ್ಮುಕಾಶ್ಮೀರ: ಶೋಪಿಯಾನ್ ಜಿಲ್ಲೆಯ ಸುಗಾನ್ ಗ್ರಾಮದಲ್ಲಿ ಭದ್ರತಾಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ವರದಿಯಾಗಿದೆ.
ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಗುರುತು ಪತ್ತೆಯಾಗಿಲ್ಲ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನೂ ಹೆಚ್ಚಿನ ಉಗ್ರರು ಅಡಗಿರುವ ಸಾಧ್ಯತೆ ಇದೆ ಎಂದು ಕಾಶ್ಮೀರ ಐಜಿಪಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಎನ್ ಕೌಂಟರ್ ಸ್ಥಳದಿಂದ ಭಾರೀ ಪ್ರಮಾಣ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೂ ಮೊದಲು ಉಗ್ರರಿಗೆ ಶರಣಾಗುವಂತೆ ಭದ್ರತಾಪಡೆಗಳು ತಿಳಿಸಿದ್ದವು. ಆದರೇ ಏಕಾಏಕಿ ಗುಂಡು ಹಾರಿಸಿದ ಪರಿಣಾಮ ಭದ್ರತಾಪಡೆಗಳು ಕೂಡ ತಕ್ಕ ಪ್ರತ್ಯುತ್ತರ ನೀಡಿ ಇಬ್ಬರನ್ನೂ ಎನ್ ಕೌಂಟರ್ ಮಾಡಿವೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಕೊಲೆ ಆರೋಪಿಯ ಕಾಲಿಗೆ ಪೊಲೀಸರಿಂದ ಫೈರಿಂಗ್
ಮಂಗಳವಾರ ಜಮ್ಮು ಕಾಶ್ಮೀರದ ಗಂದೇರ್ ಬಲ್ ಜಿಲ್ಲೆಯಲ್ಲಿ ಬಿಜೆಪಿ ನಾಯಕ ಗುಲಾಮ್ ಖಾದಿರ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಆದರೇ ಅಂಗರಕ್ಷಕರ ಸಮಯಪ್ರಜ್ಞೆಯಿಂದ ಸ್ವಲ್ಪದರಲ್ಲೇ ಪಾರಾಗಿದ್ದರು. ಈ ವೇಳೆ ಓರ್ವ ಪೊಲೀಸ್ ಕಾನ್ಸ್ ಟೇಬಲ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಇದನ್ನೂ ಓದಿ: ಹತ್ರಾಸ್ ಸಂತ್ರಸ್ಥೆ ಮತ್ತು ಆರೋಪಿ ಫೋನ್ ಮೂಲಕ ನಿರಂತರ ಸಂಪರ್ಕದಲ್ಲಿದ್ದರು: ಉ.ಪ್ರ ಪೊಲೀಸರು