Advertisement

ಶೋಪಿಯಾನ್: ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ

12:27 PM Dec 25, 2021 | Team Udayavani |

ನವದೆಹಲಿ: ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಭಾರೀ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿರುವ ಘಟನೆ ಶನಿವಾರ (ಡಿಸೆಂಬರ್ 25) ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದಿದೆ.

Advertisement

ಇದನ್ನೂ ಓದಿ:ನಾಳೆ ಮೊದಲ ಟೆಸ್ಟ್: ಆಡುವ ಬಳಗದ ಸುಳಿವು ನೀಡಿದ ಉಪನಾಯಕ ರಾಹುಲ್

ಪೊಲೀಸರ ಮಾಹಿತಿ ಪ್ರಕಾರ, ಶೋಪಿಯಾನದ ಚೌಗಾಮ್ ಪ್ರದೇಶದಲ್ಲಿ ಇಂದು ಬೆಳಗ್ಗಿನ ಜಾವ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭವಾಗಿತ್ತು. ನಂತರ ಭದ್ರತಾ ಪಡೆಯ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದು, ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಚೌಗಾಮ್ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಎನ್ ಕೌಂಟರ್ ನಡೆದಿದೆ. ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next