Advertisement

ಕಾಶ್ಮೀರ: ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರ ಸಾವು, ಕಾರ್ಯಾಚರಣೆ ಮುಂದುವರಿಕೆ

06:05 PM Jun 30, 2021 | Team Udayavani |

ಶ್ರೀನಗರ್: ದಕ್ಷಿಣ ಕಾಶ್ಮೀರದ ಕುಲ್ಗಾಮ್ ನ ಚಿಮ್ಮರ್ ಪ್ರದೇಶದಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿರುವ ಘಟನೆ ಬುಧವಾರ(ಜೂನ್ 30) ನಡೆದಿದೆ. ಘಟನಾ ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರಿದಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಅಧಿಕ ಲಾಭಾಂಶ ಕಾಯ್ದಿರಿಸಿದ ಪರಿಣಾಮ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 67 ಅಂಕ ಕುಸಿತ

ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದು, ಇನ್ನಷ್ಟೇ ಗುರುತು ಪತ್ತೆ ಹಚ್ಚಬೇಕಾಗಿದೆ. ಕೂಂಬಿಂಗ್ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಹೆಚ್ಚಿನ ವಿವರವನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಉಗ್ರರ ಗುರುತನ್ನು ಇನ್ನಷ್ಟೇ ಪತ್ತೆಹಚ್ಚಬೇಕಾಗಿದೆ. ಚೆಮ್ಮರ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಭದ್ರತಾ ಪಡೆ ಜಂಟಿ ಕಾರ್ಯಾಚರಣೆ ನಡೆಸಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.

ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಶಂಕಿತ ಪ್ರದೇಶವನ್ನು ಸುತ್ತುವರಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ಮತ್ತು ಪೊಲೀಸರು ಪ್ರತಿ ದಾಳಿ ನಡೆಸಿದ್ದರು ಎಂದು ವರದಿ ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next