Advertisement

ಜಮ್ಮು-ಕಾಶ್ಮೀರ: ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಹಿಜ್ಬುಲ್ ಉಗ್ರರು ಬಲಿ

07:04 AM May 23, 2019 | Nagendra Trasi |

ಗೋಪಾಲ್ ಪೋರಾ: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

Advertisement

ಗೋಪಾಲ್ ಪೋರಾ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭದ್ರತಾಪಡೆ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆ ಹಾಗೂ ಕೂಂಬಿಂಗ್ ನಡೆಸಿದ್ದರು. ಈ ವೇಳೆ ಭಯೋತ್ಪಾದಕರು ಭದ್ರತಾಪಡೆ ಮೇಲೆ ಗುಂಡಿನ ದಾಳಿ ನಡೆಸಿದಾಗ ಪ್ರತಿಯಾಗಿ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಹತರಾಗಿರುವುದಾಗಿ ವರದಿ ತಿಳಿಸಿದೆ.

ಬಲಿಯಾಗಿರುವ ಉಗ್ರರನ್ನು ಇನ್ನಷ್ಟೇ ಗುರುತಿಸಬೇಕಾಗಿದೆ. ಇಬ್ಬರೂ ಹಿಜ್ ಬುಲ್ ಮುಜಾಹಿದೀನ್ ಸಂಘಟನೆಗೆ ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕುಲ್ಗಾಮ್ ಮತ್ತು ಶೋಪಿಯಾನ್ ಪ್ರದೇಶಗಳಲ್ಲಿ ಮೊಬೈಲ್, ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next