Advertisement

ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾಪಡೆಯ ಎನ್ ಕೌಂಟರ್; ಇಬ್ಬರು ಹಿಜ್ಬುಲ್ ಉಗ್ರರ ಸಾವು

03:06 PM Aug 20, 2021 | Team Udayavani |

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಾಂಪೋರ್ ಪ್ರದೇಶದಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಹಿಜ್ಬುಲ್ ಮುಜಾಹಿದೀನ್ ಉಗ್ರರು ಸಾವನ್ನಪ್ಪಿರುವ ಘಟನೆ ಶುಕ್ರವಾರ (ಆಗಸ್ಟ್ 20) ನಡೆದಿದೆ.

Advertisement

ಇದನ್ನೂ ಓದಿ:ರಾಜ್ಯದಲ್ಲಿ ಮತ್ತೆ ಮೂರು ಮೂರು ಅಲೆಮಾರಿ ಶಾಲೆಗಳ ನಿರ್ಮಾಣ: ಸಿಎಂ ಬೊಮ್ಮಾಯಿ

ಎನ್ ಕೌಂಟರ್ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರ, ಸ್ಫೋಟಕ ಮತ್ತು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ಸೇನಾ ಮೂಲಗಳು ತಿಳಿಸಿವೆ. ಆವಂತಿಪೋರ್ ಪ್ರದೇಶದಲ್ಲಿ ಎನ್ ಕೌಂಟರ್ ಮುಂದುವರಿದಿದ್ದು, ಇನ್ನೊರ್ವ ಉಗ್ರ ಸಾವನ್ನಪ್ಪಿರುವುದಾಗಿ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಸಾವನ್ನಪ್ಪಿರುವ ಉಗ್ರನನ್ನು ಮುಸಾಯಿಬ್ ಅಹ್ಮದ್ ಎಂದು ಗುರುತಿಸಲಾಗಿದೆ. ಈತ ಖ್ರೇವ್ ಪ್ರದೇಶದ ನಿವಾಸಿಯಾಗಿದ್ದು, ಇನ್ನೊಬ್ಬ ಉಗ್ರನ ಗುರುತನ್ನು ಇನ್ನಷ್ಟೇ ಪತ್ತೆಹಚ್ಚ ಬೇಕಾಗಿದೆ ಎಂದು ವರದಿ ವಿವರಿಸಿದೆ.

ಇಬ್ಬರು ಉಗ್ರರು ಹಿಜ್ಬುಲ್ ಮುಜಾಹಿದೀನ್ ಸಂಘಟನೆಗೆ ಸೇರಿದವರಾಗಿದ್ದು, ಇವರು ದಕ್ಷಿಣ ಕಾಶ್ಮೀರದಲ್ಲಿನ ನಾಗರಿಕರ ಹತ್ಯೆಯಲ್ಲಿ ಶಾಮೀಲಾಗಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next