Advertisement

ಜಮ್ಮು-ಕಾಶ್ಮೀರ: ಕುಲ್ಗಾಮ್ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಸಾವು

04:49 PM May 25, 2020 | Nagendra Trasi |

ನವದೆಹಲಿ: ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಈ ವೇಳೆ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿರುವ ಘಟನೆ ಕುಲ್ಗಾಮ್ ಜಿಲ್ಲೆಯ ಖುರ್ ಗ್ರಾಮದ ದಾಮ್ ಹಾಲ್ ಹಾಂಜಿಪೋರಾ ಪ್ರದೇಶದಲ್ಲಿ ನಡೆದಿದೆ.

Advertisement

ಇಬ್ಬರು, ಮೂವರು ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಕುಲ್ಗಾಮ್ ಪೊಲೀಸ್, ಸಿಆರ್ ಪಿಎಫ್ ಮತ್ತು 34 ಆರ್, ಆರ್ ಇಡೀ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ನಡೆಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಗ್ರರಿಗೆ ಶರಣಾಗಲು ಸೂಚಿಸಲಾಗಿತ್ತು. ಆದರೆ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಅದಕ್ಕೆ ಪ್ರತಿಯಾಗಿ ಸೇನೆ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next