Advertisement

ಇಬ್ಬರು ಮನೆಗಳ್ಳರ ಸೆರೆ, 78ಗ್ರಾಂ ಆಭರಣ ವಶಕ್ಕೆ

01:08 PM Jun 12, 2022 | Team Udayavani |

ಕಲಬುರಗಿ: ನಗರ ಹಲವಾರು ಕಡೆಗಳಲ್ಲಿ ಮನೆ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಮಹಿಳೆ ಸೇರಿದಂತೆ ಇಬ್ಬರನ್ನು ಸಬ್‌ ಅರ್ಬನ್‌ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಬಂಧಿತರನ್ನು ಮಹ್ಮದ್‌ ಮುನಿರೋದ್ದಿನ್‌ ಶೇಖ್‌ ಮತ್ತು ಮಲ್ಲಮ್ಮ ಪೂಜಾರಿ ಎಂದು ಗುರುತಿಸಲಾಗಿದೆ.

ಬಂಧಿತರಿಂದ ಅಂದಾಜು ಒಟ್ಟು 4ಲಕ್ಷ ರೂ. ಮೌಲ್ಯದ 78 ಗ್ರಾಂ ಚಿನ್ನದ ಆಭರಣ ವಶಪಡಿಸಿಕೊಳ್ಳಲಾಗಿದೆ. ನಗರದ ಹಲವು ಬಡಾವಣೆಗಳಲ್ಲಿ ಮನೆಗಳಿಗೆ ಕೀಲಿ ಹಾಕಿರುವುದನ್ನು ಗಮನಿಸುವ ಈ ಇಬ್ಬರು ರಾತ್ರಿ ಹೊತ್ತಿನಲ್ಲಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದರು. ಸಾರ್ವಜನಿಕ ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next