Advertisement

ಸದ್ಯದಲ್ಲಿಯೇ 2 ಸಾವಿರ ಪೊಲೀಸ್‌ ಕಾನ್‌ಸ್ಪೇಬಲ್‌ ನೇಮಕ: ಪ್ರವೀಣ್‌ ಸೂದ್‌

08:39 PM Apr 22, 2022 | Team Udayavani |

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿರುವ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ 4 ಸಾವಿರ ಪೊಲೀಸ್‌ ಕಾನ್‌ಸ್ಪೇಬಲ್‌ಗ‌ಳನ್ನು ನೇಮಕ ಮಾಡಿಕೊಳ್ಳಲಾಗಿದೆಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ತಿಳಿಸಿದರು.

Advertisement

ಕೋರಮಂಗಲದ ಕೆಎಸ್‌ಆರ್‌ಪಿ ಮೈದಾನದಲ್ಲಿ ಪೊಲೀಸ್‌ ಇಲಾಖೆ ಶುಕ್ರವಾರ ಆಯೋಜಿಸಿದ್ದ “ಡಿಜಿಪಿ ಅವರಿಗೆ ಸರ್ವಿಸ್‌ ಕವಾಯತು’ ನೀಡುವ ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ಮತ್ತೆ 2 ಸಾವಿರಕ್ಕೂ ಹೆಚ್ಚಿನ ಪೊಲೀಸ್‌ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದರು.

ಪ್ರತಿಭಟನೆಗಳು, ಚುನಾವಣೆ, ಹಿಜಾಬ್ ವಿವಾದ ಸೇರಿ ಎಲ್ಲಾ ಘಟನೆಗಳನ್ನು ಇಲಾಖೆ ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆ ಸೇರಿದಂತೆ ಹಲವು ಚುನಾವಣೆಗಳು ಇರುವುದರಿಂದ ಭದ್ರತೆ ಅವಶ್ಯಕತೆ ಇರುತ್ತದೆ. ಸಿಬ್ಬಂದಿಯ ಅಗತ್ಯತೆಯಿದ್ದು, ಸದ್ಯದಲ್ಲಿಯೇ 2 ಸಾವಿರ ಕಾನ್‌ಸ್ಪೇಬಲ್‌ ಗ‌ಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ನೇರವಾಗಿ ಭಾಗಿಯಾದವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗುವಂತೆ ನೋಡಿಕೊಳ್ಳಲಾಗುತ್ತದೆ. ಪರೋಕ್ಷವಾಗಿ ಯಾವುದೇ ಕಾಣದ ಕೈಗಳಿದ್ದರೂ ಪತ್ತೆ ಹಚ್ಚಲಾಗುತ್ತದೆ. ಹಿಂದೂ ಮುಸ್ಲಿಂ ಹೆಸರಲ್ಲಿ ಸಾಮಾಜಿಕ ಜಾಲಾತಾಣದಲ್ಲಿ ಹುಸಿ ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಸಮಾಜದ ಶಾಂತಿ ಕೆಡಿಸುವವರು ಯಾರೇ ಆಗಿದ್ದರೂ ಬಂಧಿಸಲಾಗುತ್ತದೆ ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಪಿಎಸ್‌ಐ ತಪ್ಪಿತಸ್ಥರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲ್ಲ
ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕತೆಯಿಂದ ನಡೆಸಲಾಗಿದೆ. ಪ್ರಕರಣದಲ್ಲಿ ಶಾಮೀಲಾದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ. ತಪ್ಪಿತಸ್ಥರಿಗೆ ಮುಂದೆಯೂ ಪಿಎಸ್‌ಐ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ. ಪ್ರತಿಯೊಂದು ಉತ್ತರ ಪತ್ರಿಕೆಯನ್ನೂ ಮೂರು ಬಾರಿ ಪರಿಶೀಲಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಯಾವುದೇ ಪರೀಕ್ಷೆಯಲ್ಲಿ ಅಕ್ರಮ ಮರುಕಳಿಸದಂತೆ ಎಚ್ಚರ ವಹಿಸಲಾಗುತ್ತದೆ ಎಂದು ತಿಳಿಸಿದರು.

Advertisement

ಹೈಕೋರ್ಟ್‌ ಆದೇಶದಂತೆ ಈಗಾಗಲೇ ಮಸೀದಿ ಸೇರಿದಂತೆ ಹೆಚ್ಚು ಶಬ್ಧ ಮಾಡುವಂತ ನೈಟ್‌ಕ್ಲಬ್‌ಗಳಿಗೆ ನೋಟಿಸ್‌ ನೀಡಲಾಗಿದೆ. ನ್ಯಾಯಾಲಯದ ಆದೇಶ ಉಲ್ಲಂಘನೆಗೆ ಅವಕಾಶ ನೀಡುವುದಿಲ್ಲ. ಧಾರ್ಮಿಕ ಕೇಂದ್ರಗಳು ಕೂಡ ಕಾನೂನು ಪಾಲನೆ ಮಾಡುವಂತೆ ನೋಡಿಕೊಳ್ಳಲಾಗುತ್ತಿದೆ.
– ಪ್ರವೀಣ್‌ ಸೂದ್‌, ಡಿಜಿ-ಐಜಿಪಿ

Advertisement

Udayavani is now on Telegram. Click here to join our channel and stay updated with the latest news.

Next