Advertisement
ಮಳೆಯಿಂದಾಗಿ ನಗರದಲ್ಲಿ ಸೃಷ್ಟಿಯಾದ ರಸ್ತೆಗುಂಡಿಗಳನ್ನು ಅಕ್ಟೋಬರ್ 24ರೊಳಗೆ ದುರಸ್ತಿಪಡಿಸುವಂತೆ ಈ ಹಿಂದೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಗಡುವು ನೀಡಿದ್ದರು. ಆದರೆ, ಆ ಅವಧಿಯಲ್ಲಿ ಗುಂಡಿಗಳನ್ನು ಅಧಿಕಾರಿಗಳು ದುರಸ್ತಿಪಡಿಸದ ಹಿನ್ನೆಲೆಯಲ್ಲಿ ಮೇಯರ್ ಆರ್.ಸಂಪತ್‌ರಾಜ್ ಮುಖ್ಯಮಂತ್ರಿಗಳನ್ನು ಬೇಟಿ ಮಾಡಿ 10 ದಿನಗಳ ಕಾಲಾವಕಾಶ ಪಡೆದಿದ್ದರು.
Related Articles
ಬಿಬಿಎಂಪಿ ಆಯುಕ್ತರು ಹಾಗೂ ಮೇಯರ್ ಆರ್.ಸಂಪತ್‌ರಾಜ್ ಎರಡು ತಂಡಗಳಲ್ಲಿ ನಗರದ ಎಂಟೂ ವಲಯಗಳಲ್ಲಿ ರಸ್ತೆಗುಂಡಿಗಳ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಅದಕ್ಕಾಗಿಯೇ ವಿಶೇಷ ಆಯುಕ್ತರ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಮೇಯರ್, ನಗರದ ಎಂಟೂ ವಲಯಗಳಲ್ಲಿ ಮಂಗಳವಾರ ಮಧ್ಯಾಹ್ನದಿಂದ ಪರಿಶೀಲನಾ ಕಾರ್ಯ ಆರಂಭವಾಗಿದ್ದು, ರಸ್ತೆಗುಂಡಿ ಕಂಡುಬರುವ ವಲಯ ವ್ಯಾಪ್ತಿಯ ಮುಖ್ಯ ಎಂಜಿನಿಯರ್ ಸೇರಿ ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸುವುದಾಗಿ ತಿಳಿಸಿದ್ದಾರೆ.
Advertisement
ನಗರದಲ್ಲಿ ಶೇ.98ರಷ್ಟು ರಸ್ತೆಗುಂಡಿಗಳನ್ನು ದುರಸ್ತಿಪಡಿಸಲಾಗಿದ್ದು, ಉಳಿದಿರುವ ಶೇ.2ರಷ್ಟು ಗುಂಡಿಗಳನ್ನು ಎರಡು ದಿನಗಳಲ್ಲಿ ದುರಸ್ತಿಪಡಿಸಲಾಗುವುದು. ಪಾಲಿಕೆಯ ಸಿಬ್ಬಂದಿ ಸೋಮವಾರ ರಾತ್ರಿಯೂ ಕಾರ್ಯನಿರ್ವಹಿಸುತ್ತಿದ್ದು, ಈ ಹಿಂದೆ ತಾತ್ಕಾಲಿಕವಾಗಿ ದುರಸ್ತಿಪಡಿಸಿದ ಭಾಗಗಳಲ್ಲಿ ಗುಂಡಿಗಳು ಸೃಷ್ಟಿಯಾಗುತ್ತಿವೆ. -ಎಂ.ಆರ್.ವೆಂಕಟೇಶ್, ಮುಖ್ಯ ಎಂಜಿನಿಯರ್