Advertisement

ನೈಸ್‌ ರಸ್ತೆಯಲ್ಲಿ ರಾತ್ರಿ ದ್ವಿಚಕ್ರ ವಾಹನ ನಿರ್ಬಂಧ 

02:06 PM Jan 14, 2022 | Team Udayavani |

ಬೆಂಗಳೂರು: ಸುರಕ್ಷತಾ ದೃಷ್ಟಿಯಿಂದ ಜ.16ರಿಂದ ರಾತ್ರಿ 10 ಗಂಟೆಯಿಂದ ಮುಂಜಾನೆ ಐದು ಗಂಟೆವರೆಗೆ ನೈಸ್‌ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರ ನಿರ್ಬಂಧಿಸಿ ನೈಸ್‌ ಸಂಸ್ಥೆ ಆದೇಶ ಹೊರಡಿಸಿದೆ.

Advertisement

ನೈಸ್‌ ರಸ್ತೆಯಲ್ಲಿ ರಾತ್ರಿ ವೇಳೆ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಸಂಚಾರ ಜಂಟಿ ಆಯುಕ್ತ ಡಾ ಬಿ.ಆರ್‌.ರವಿಕಾಂತೇಗೌಡ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಹಲವು ಬಾರಿ ಸೂಚಿಸಿದ್ದರು. ಇತ್ತೀಚೆಗೆ ನೈಸ್‌ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದರು. ಈ ಎಲ್ಲ ಘಟನೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತ ದೃಷ್ಟಿಯಿಂದ ನೈಸ್‌ ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಷೇಧಿಸುವಂತೆ ಬೆಂಗಳೂರು ನಗರ ಸಂಚಾರ ಜಂಟಿ ಆಯುಕ್ತರು ಸಂಸ್ಥೆಗೆ ಸಲಹೆ ನೀಡಿದ್ದರು. ಅದನ್ನು ನೈಸ್‌ ಸಂಸ್ಥೆ ಒಪ್ಪಿಕೊಂಡಿದ್ದು, ಮುಂದಿನ ಆದೇಶದವರೆಗೂ ಜ. 16 ರಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿರ್ಬಂಧಿಸಿದೆ.

ನೈಸ್‌ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿಯಿಂದ ರಾತ್ರಿ ವೇಳೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರ ನಿಯಂತ್ರಣಕ್ಕೆ ಮುಂದಾಗಿರುವ ನೈಸ್‌ ಸಂಸ್ಥೆ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿಷೇಧ ಹೇರಿದೆ. ಮತ್ತೂಂದೆಡೆ ದ್ವಿಚಕ್ರ ವಾಹನ ಸವಾರರ ಮೇಲೆ ದಾಳಿ ಮತ್ತು ದರೋಡೆ ಪ್ರಕರಣ ಹೆಚ್ಚಾಗಿ ನಡೆಯುತ್ತಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next