Advertisement
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವಿಧಾನಸೌಧ ಮುಖ್ಯದ್ವಾರದ ಬಳಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಿಸಿ ಅವರು ಮಾತನಾಡಿದರು.
ಕಳೆದ ಆರ್ಥಿಕ ವರ್ಷದಲ್ಲಿ 2000 ದ್ವಿಚಕ್ರ ವಾಹನ ವಿತರಿಸಬೇಕಿತ್ತು. ಎರಡು ಬಾರಿ ಟೆಂಡರ್ ಪ್ರಕ್ರಿಯೆಯಲ್ಲಿ ತೊಂದರೆ ಹಾಗೂ ಕೇಂದ್ರ ಸರ್ಕಾರವು ವಾಹನದ ಮಾದರಿ ಬದಲಾವಣೆ ಮಾಡಿದ್ದರಿಂದ ಸಕಾಲದಲ್ಲಿ ವಿತರಿಸಲು ಸಾಧ್ಯವಾಗಿರಲಿಲ್ಲ. ಪ್ರಸಕ್ತ ವರ್ಷದಲ್ಲಿ 4000 ವಿಕಲಚೇತನರಿಗೆ ದ್ವಿಚಕ್ರ ವಾಹನ ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದ್ದು, ಡಿಸೆಂಬರ್‌ನೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.
Related Articles
Advertisement
ಸಚಿವೆ ಉಮಾಶ್ರೀ ಮಾತನಾಡಿ, ಒಟ್ಟು 14 ಕೋಟಿ ರೂ. ವೆಚ್ಚದಲ್ಲಿ ವಿಕಲಚೇತನರಿಗೆ 2000 ದ್ವಿಚಕ್ರ ವಾಹನ ವಿತರಿಸಲಾಗುತ್ತಿದೆ. ಬೆಂಗಳೂರು ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಸೋಮವಾರ ವಿತರಿಸಲಾಗಿದ್ದು, ಇತರೆ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿತರಿಸಲಿದ್ದಾರೆ ಎಂದು ತಿಳಿಸಿದರು. ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಇತರರು ಉಪಸ್ಥಿತರಿದ್ದರು.
ಸಚಿವರಿಗಾಗಿ ಕಾದು ಕುಳಿತ ಸಿಎಂ!ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವಿಧಾನಸೌಧದ ಮುಂಭಾಗ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗಾಗಿ ಕಾದು ಕುಳಿತ ಪ್ರಸಂಗ ನಡೆಯಿತು. ಬೆಳಗ್ಗೆ 10.30ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಫಲಾನುಭವಿಗಳು ಸಕಾಲದಲ್ಲಿ ಆಸೀನರಾಗಿದ್ದರು. ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಆಗಮಿಸಿದಾಗ ಸಮಯ 11.20 ಕಳೆದಿತ್ತು. ಆ ಹೊತ್ತಿಗೆ ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖೀಸಲಾಗಿದ್ದ ಸಚಿವರಾದ ಆರ್.ರೋಷನ್ ಬೇಗ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಎಚ್.ಎಂ.ರೇವಣ್ಣ ಯಾರೊಬ್ಬರೂ ಇರಲಿಲ್ಲ. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಿಸಿ ವೇದಿಕೆಗೆ ಬಂದು 10 ನಿಮಿಷ ಕಳೆದ ಬಳಿಕ ಸಚಿವೆ ಉಮಾಶ್ರೀ ಬಂದರು. ನಂತರ ಮುಖ್ಯಮಂತ್ರಿಗಳು ಮಾತನಾಡಿದರು. ವಿಕಲಚೇತನರ ಪರದಾಟ
ವಿಕಲಚೇತನರಿಗೆ ವಿತರಿಸಲಾದ ಕೆಲ ಯಂತ್ರಚಾಲಿತ ದ್ವಿಚಕ್ರ ವಾಹನಗಳಿಗೆ ಹೆಚ್ಚುವರಿ ಎರಡು ಚಕ್ರಗಳನ್ನು ಸಮತೋಲಿತವಾಗಿ ಅಳವಡಿಸಿರಲಿಲ್ಲ. ಇದರಿಂದ ಚಾಲನೆ ಮಾಡುವಾಗ ಎರಡರಲ್ಲಿ ಒಂದು ನೆಲಮಟ್ಟದಿಂದ ಮೇಲ್ಭಾಗದಲ್ಲಿದ್ದರಿಂದ ಸಮತೋಲನ ಸಾಧಿಸುವುದು ಕಷ್ಟಕರವಾಗಿತ್ತು. ಕೆಲವರು ಅಡ್ಡಾದಿಡ್ಡಿಯಾಗಿ ಚಾಲನೆ ಮಾಡಿದ್ದು ಕಂಡುಬಂತು. ತಕ್ಷಣವೇ ಸ್ಥಳದಲ್ಲಿದ್ದ ತಾಂತ್ರಿಕ ಸಿಬ್ಬಂದಿ ಚಕ್ರಗಳನ್ನು ಸಮತೋಲನಗೊಳಿಸಿ ಕೊಟ್ಟು ಸುಗಮ ಚಾಲನೆಗೆ ನೆರವಾದರು.