ಬೆಂಗಳೂರು: ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹ ನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆ ಚಿಂತಾಮಣಿ ತಾಲೂಕಿನ ವೆಂಕಟಸ್ವಾಮಿ(38) ಬಂಧಿತ. ಆರೋಪಿಯಿಂದ 6.70 ಲಕ್ಷ ರೂ. ಮೌಲ್ಯದ 12 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಬಂಧನದಿಂದ ಕೆಂಗೇರಿ, ಬ್ಯಾಟರಾ ಯನಪುರ, ಕೆ.ಆರ್.ಪುರ, ಸಂಪಿಗೆಹಳ್ಳಿ, ಯಲಹಂಕ, ಹೆಣ್ಣೂರು, ಕಾಡುಗೋಡಿ ಮತ್ತುಜ್ಞಾನಭಾರತಿ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದ್ದ 12 ದ್ವಿಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಆರೋಪಿ ಇತ್ತೀಚೆಗೆ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ದ್ವಿಚಕ್ರವಾಹನದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಅದನ್ನು ಗಮನಿಸಿದ ಗಸ್ತು ಪೊಲೀಸರು ಆನುಮಾನದ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದುವಿಚಾರಣೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.
ವಿಚಾರಣೆ ವೇಳೆ ಆರೋಪಿ, ರಾತ್ರಿ ವೇಳೆ ಮನೆ ಮುಂದೆ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಪರಾರಿಯಾಗುತ್ತಿದ್ದ. ಬಳಿಕ ಆಂಧ್ರ ಪ್ರದೇಶದಗ್ರಾಮೀಣ ಪ್ರದೇಶಗಳಲ್ಲಿ ಕೆಲ ಗ್ರಾಹಕರನ್ನು ಹುಡುಕಿ ಐದರಿಂದ 10 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದ. ವಾಹನಗಳ ದಾಖಲೆ ಕೇಳಿದಾಗ, ಮತ್ತೂಮ್ಮೆ ತಂದು ಕೊಡುವುದಾಗಿ ಹೇಳಿ ಪರಾರಿಯಾಗುತ್ತಿದ್ದ. ಬಂದ ಹಣದಲ್ಲಿ ಮೋಜು-ಮಸ್ತಿ ಮಾಡಿ ಜೀವನ ನಡೆಸುತ್ತಿದ್ದ. ಈತನ ವಿರುದ್ಧ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.