ದಾಂತೇವಾಡ(ಛತ್ತೀಸ್‌ಗಢ): ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯ ಪೊಲೀಸ್ ಘಟಕದ ಜಿಲ್ಲಾ ಮೀಸಲು ಗಾರ್ಡ್(ಡಿಆರ್‌ಜಿ) ತಂಡವು ನಕ್ಸಲೀಯರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಅರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಾಂತೇವಾಡ-ಸುಕ್ಮಾ ಅಂತರಜಿಲ್ಲಾ ಗಡಿಯಲ್ಲಿರುವ ನಗರಂ-ಪೊರೊ ಹಿರ್ಮಾ ಅರಣ್ಯದ ಬಳಿ ನಿಷೇಧಿತ ಸಂಘಟನೆಯ ದರ್ಭಾ ವಿಭಾಗಕ್ಕೆ ಸೇರಿದ ನಕ್ಸಲೀಯರು ಇರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಗಸ್ತು ತಂಡವು ಪ್ರದೇಶವನ್ನು ಸುತ್ತುವರೆದಿರುವಾಗ, ಎರಡೂ ಕಡೆಯವರ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಅವರು ಹೇಳಿದರು.
ಗುಂಡಿನ ದಾಳಿ ನಿಂತ ನಂತರ ಇಬ್ಬರು ಮಹಿಳಾ ನಕ್ಸಲೀಯರ ಮೃತದೇಹಗಳು ಹಾಗೂ ಒಂದು “ಇನ್ಸಾಸ್ ರೈಫಲ್ ಮತ್ತು 12 ಬೋರ್ ರೈಫಲ್” ಅನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.