ವಾಷಿಂಗ್ಟನ್: ಕೊರೊನಾ ಲಸಿಕೆ ತಯಾರಿಕೆಗೆ ಬೇಕಾಗುವ ಕಚ್ಚಾವಸ್ತುಗಳನ್ನು ಅಮೆರಿಕದಿಂದ ಇತರ ದೇಶಗಳಿಗೆ ರಫ್ತು ಮಾಡದಂತೆ ತಡೆಯೊಡ್ಡಿರುವ ತನ್ನ ನಿರ್ಧಾರವನ್ನು ಅಮೆರಿಕ ಸರ್ಕಾರ ಸಮರ್ಥಿಸಿಕೊಂಡಿದೆ.
ಕೊರೊನಾ ಲಸಿಕೆ ವಿಚಾರದಲ್ಲಿ ಅಮೆರಿಕದವರಿಗೆ ಮೊದಲ ಆದ್ಯತೆ ನೀಡುವ ಸಲುವಾಗಿ ಈ ನಿರ್ಧಾರ ಕೈಗೊಂಡಿದ್ದಾಗಿ ಅಲ್ಲಿನ ಗೃಹ ಸಚಿವಾಲಯದ ವಕ್ತಾರ ನೆಡ್ ಪ್ರೈಸ್ ತಿಳಿಸಿದ್ದಾರೆ.
ಅಮೆರಿಕದ ಈ ನಿರ್ಧಾರದಿಂದಾಗಿ ಭಾರತದಲ್ಲಿ ಲಸಿಕೆ ಉತ್ಪಾದನೆಗೆ ಕೊಂಚ ಹಿನ್ನಡೆಯಾಗಿದೆ. ಹಾಗಾಗಿ, ಅಮೆರಿಕ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಭಾರತ, ಬೈಡನ್ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಇದನ್ನೂ ಓದಿ :ಅಕ್ರಮವಾಗಿ ರೆಮ್ ಡಿಸಿವಿಯರ್ ಇಂಜೆಕ್ಷನ್ ಮಾರಾಟ : ಸ್ಟಾಫ್ ನರ್ಸ್ ಸೇರಿ ಮೂವರ ಬಂಧನ
“ಈ ಮನವಿಯನ್ನು ಪುರಸ್ಕರಿಸಲಾಗುತ್ತದೆಯೇ’ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರೈಸ್, “”ಅಮೆರಿಕದ ಲಸಿಕಾ ಅಭಿಯಾನವನ್ನು ಯಶಸ್ವಿಯಾಗಿ ಮುಗಿಸಿದ ನಂತರವಷ್ಟೇ ಬೇರೆ ವಿಚಾರಗಳ ಬಗ್ಗೆ ಮಾತನಾಡುತ್ತೇವೆ” ಎಂದಿದ್ದಾರೆ.