Advertisement
ಉಳ್ಳಾಲದಲ್ಲಿ ವ್ಯಕ್ತಿಯೋರ್ವ ತನ್ನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲು ಪ್ರಯತ್ನಿಸಲಾಗಿದೆ ಎಂದು ಸುಳ್ಳು ಕಥೆ ಕಟ್ಟಿ ಉಳ್ಳಾಲದ ಶಾಂತಿಯನ್ನು ಕೆಡಿಸಲು ಪ್ರಯತ್ನಿಸಿದ್ದು, ಆತನ ವಿರುದ್ಧ ಪೋಲೀಸ್ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿರುವುದು ಶ್ಲಾಘನೀಯ. ಆದರೆ ಈ ಘಟನೆಯು ಉಳ್ಳಾಲದ ಸೌಹಾರ್ದತೆ, ಶಾಂತಿ ಕೆಡಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಇದರ ಹಿಂದೆ ಕೆಲಸ ಮಾಡುತ್ತಿರುವಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಪೋಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ಕಾಣದ ಕೈಗಳನ್ನು ಕೂಡಾ ಪತ್ತೆ ಹಚ್ಚಿ ಕಾನೂನಿನ ಮುಂದೆ ತರಬೇಕೆಂದು ಮಾಜಿ ಸಚಿವ,ವಿಪಕ್ಷ ಉಪ ನಾಯಕ,ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
Advertisement
ಉಳ್ಳಾಲ ಯುವಕನ ಸುಳ್ಳು ಕಥೆ ಪ್ರಕರಣ : ಘಟನೆ ಹಿಂದೆ ಕಾಣದ ಕೈಗಳ ಕೈವಾಡ ಶಂಕೆ : ಯು.ಟಿ.ಖಾದರ್
01:08 PM Aug 04, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.