Advertisement

ಉಳ್ಳಾಲ ಯುವಕನ ಸುಳ್ಳು ಕಥೆ ಪ್ರಕರಣ : ಘಟನೆ ಹಿಂದೆ ಕಾಣದ ಕೈಗಳ ಕೈವಾಡ ಶಂಕೆ : ಯು.ಟಿ.ಖಾದರ್

01:08 PM Aug 04, 2022 | Team Udayavani |

ಉಳ್ಳಾಲ : ಉಳ್ಳಾಲದಲ್ಲಿ ಹಲ್ಲೆಯ ಸುಳ್ಳು ಕಥೆ ಕಟ್ಟಿದವನ ವಿರುದ್ಧ ಕ್ರಮ ಶ್ಲಾಘನೀಯ,ಆದರೆ ಉಳ್ಳಾಲದ ಶಾಂತಿಯನ್ನು ಕೆಡಿಸಲು ಪ್ರಯತ್ನಿಸಿದ ಈ ಘಟನೆಯನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ಶಕ್ತಿಯನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

Advertisement

ಉಳ್ಳಾಲದಲ್ಲಿ ವ್ಯಕ್ತಿಯೋರ್ವ ತನ್ನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲು ಪ್ರಯತ್ನಿಸಲಾಗಿದೆ ಎಂದು ಸುಳ್ಳು ಕಥೆ ಕಟ್ಟಿ ಉಳ್ಳಾಲದ ಶಾಂತಿಯನ್ನು ಕೆಡಿಸಲು ಪ್ರಯತ್ನಿಸಿದ್ದು, ಆತನ ವಿರುದ್ಧ ಪೋಲೀಸ್ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿರುವುದು ಶ್ಲಾಘನೀಯ. ಆದರೆ ಈ ಘಟನೆಯು ಉಳ್ಳಾಲದ ಸೌಹಾರ್ದತೆ, ಶಾಂತಿ ಕೆಡಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಇದರ ಹಿಂದೆ ಕೆಲಸ ಮಾಡುತ್ತಿರುವಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಪೋಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ಕಾಣದ ಕೈಗಳನ್ನು ಕೂಡಾ ಪತ್ತೆ ಹಚ್ಚಿ ಕಾನೂನಿನ ಮುಂದೆ ತರಬೇಕೆಂದು ಮಾಜಿ ಸಚಿವ,ವಿಪಕ್ಷ ಉಪ ನಾಯಕ,ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next