Advertisement

ಯುಎಇ ಕ್ರಿಕೆಟಿಗ ಶಬೀರ್‌ಗೆ 4 ವರ್ಷ ನಿಷೇಧ

08:51 PM Sep 07, 2021 | Team Udayavani |

ದುಬಾೖ: ಭ್ರಷ್ಟಾಚಾರ ನಿಗ್ರಹ ಸಂಹಿತೆಯ ಆರು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ ಯುಎಇ ಆಟಗಾರ ಗುಲಾಂ ಶಬೀರ್‌ ಅವರಿಗೆ ನಾಲ್ಕು ವರ್ಷಗಳ ನಿಷೇಧ ವಿಧಿಸಿದೆ. ಆಗಸ್ಟ್‌ 2025ರ ವರೆಗೆ ನಿಷೇಧ ಜಾರಿಯಲ್ಲಿರಲಿದೆ.

Advertisement

2 ವರ್ಷ ಹಿಂದಿನ ಪ್ರಕರಣ :

2019ರಲ್ಲಿ ನೇಪಾಲ-ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ನಡೆಯಿತೆನ್ನಲಾದ ಭ್ರಷ್ಟಾಚಾರದ ಆರೋಪಗಳ ಕುರಿತು ಐಸಿಸಿಯ ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ ವರದಿ ಮಾಡದ ಕಾರಣ ಶಬೀರ್‌ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಹೀಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯು ಭ್ರಷ್ಟಾಚಾರ ನಿಗ್ರಹ ಸಂಹಿತೆಯನ್ನು ಉಲ್ಲಂ ಸಿದ ಆರೋಪದಲ್ಲಿ ಅವರನ್ನು ದೋಷಿ ಎಂದು ಪರಿಗಣಿಸಲಾಗಿದೆ. ಶಬೀರ್‌ ಕೂಡ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಶಬೀರ್‌ ಸೆಕ್ಷನ್‌ 2.4.4 ನಿಯಮವನ್ನು ಅನುಸರಿಸಲಿಲ್ಲ. ಭ್ರಷ್ಟಾಚಾರ ವಿರೋಧಿ ಘಟಕಕ್ಕೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ನೀಡಿಲ್ಲ ಎಂದು ಐಸಿಸಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next