Advertisement

ಬಿಜೆಪಿಗೆ ಗುಡ್ ಬೈ ಎಂದಿದ್ದ ಯು.ಬಿ.ಬಣಕಾರ್ ಇಂದು ಕಾಂಗ್ರೆಸ್ ಸೇರ್ಪಡೆ

01:16 PM Nov 21, 2022 | Team Udayavani |

ಬೆಂಗಳೂರು: ಹಿರೇಕೆರೂರು ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಯು.ಬಿ.ಬಣಕಾರ್ ಇಂದು ಸಂಜೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

Advertisement

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕರು ಬಿಜೆಪಿ ನಾಯಕನನ್ನು ಸ್ವಾಗತಿಸಲಿದ್ದಾರೆ.

ಯು.ಬಿ.ಬಣಕಾರ್ ಹಿರೇಕೆರೂರು ಕ್ಷೇತ್ರದಲ್ಲಿ ಶಾಸಕರಾಗಿದ್ದರು. 2013ರಲ್ಲಿ ಬಿ.ಸಿ.ಪಾಟೀಲ್ ವಿರುದ್ಧ ಸೋಲು ಕಂಡಿದ್ದರು. ಬಳಿಕ 2018ರಲ್ಲೂ ಬಣಕಾರ್‍ಗೆ ಹಿನ್ನೆಡೆಯಾಗಿತ್ತು.

ಹಿರೆಕೆರೂರು ಕ್ಷೇತ್ರದಲ್ಲಿ ಜಯಗಳಿಸಿದ್ದ ಬಿ.ಸಿ.ಪಾಟೀಲ್ 16 ಮಂದಿ ಇತರ ಶಾಸಕರೊಂದಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ್ದರು. ಬಳಿಕ ರಚನೆಯಾದ ಬಿಜೆಪಿ ಸರ್ಕಾರದಲ್ಲಿ ಕೃಷಿ ಸಚಿವರಾಗಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಬಿ.ಸಿ.ಪಾಟೀಲ್ ಅವರಿಗೆ ಟಿಕೆಟ್ ನೀಡಲಿದೆ ಎಂಬ ಕಾರಣಕ್ಕೆ ಅಸಮಾಧಾನಗೊಂಡಿದ್ದ ಬಣಕಾರ್ ಇತ್ತೀಚೆಗೆ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ:ವಾರದ ಹಿಂದೆಯೇ ಮಂಗಳೂರಿಗೆ ಬಂದಿದ್ದ ಶಾರೀಕ್; ನಾಗುರಿ ಘಟನೆಗೆ ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಪ್ರಭಾವ

Advertisement

ಬೆಂಬಲಿಗರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಕಾಂಗ್ರೆಸ್ ಸೇರುವ ನಿರ್ಧಾರ ಕೈಗೊಂಡಿದ್ದರು. ಅದರಂತೆ ಇಂದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಬಹುತೇಕ ಕಾಂಗ್ರೆಸ್ ಟಿಕೆಟ್‍ನಿಂದ ಹಿರೆಕೆರೂರು ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ 14 ಮಂದಿ ಶಾಸಕರಿಗೆ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ. ಅಷ್ಟು ಮಂದಿ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳ ಹುಡುಗಾಟದಲ್ಲಿ ತೊಡಗಿದೆ. ಬಿಜೆಪಿ ಅಥವಾ ಜೆಡಿಎಸ್ ಪಕ್ಷದಿಂದ ಆಗಮಿಸುವ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡು ಕಣಕ್ಕಿಳಿಸಲು ಮುಂದಾಗಿದೆ. ಅದರ ಮೊದಲ ಹಂತವಾಗಿ ಹಿರೆಕೇರೂರು ಕ್ಷೇತ್ರದಲ್ಲಿ ಆಪರೇಷನ್ ಹಸ್ತ ನಡೆದಿದೆ.

ಬಣಕಾರ್ ಅವರ ಸೇರ್ಪಡೆಯಿಂದ ಹಿರೆಕೆರೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಬಲ ಹೆಚ್ಚಾಗಲಿದೆ ಎಂದು ಪಕ್ಷದ ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಹಾವೇರಿ ಮುಖ್ಯಮಂತ್ರಿ ಅವರ ತವರು ಜಿಲ್ಲೆಯಾಗಿದ್ದು ಅಲ್ಲಿಂದಲೇ ಬಿಜೆಪಿ ನಾಯಕರೊಬ್ಬರು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು, ಬಿಜೆಪಿಗೆ ಆಘಾತ ನೀಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next