Advertisement
ಪ್ರಸಿದ್ಧ ವೀಣಾವಾದಕಿ ವಿದುಷಿ ಪವನ ಬಿ. ಆಚಾರ್ ಮಣಿಪಾಲ ನಿರ್ದೇಶನ ಮತ್ತು ನಿರ್ವಹಣೆಯೊಂದಿಗೆ ಕರಾವಳಿಯ 108 ಮಂದಿ ವೀಣಾವಾದಕರು ಮತ್ತು ಸಹ ಕಲಾವಿದರ ಸಹಭಾಗಿತ್ವದೊಂದಿಗೆ ಶತವೀಣಾವಲ್ಲರಿ ಜರಗಿತು. ವಿದುಷಿ ಪವನ ಬಿ. ಆಚಾರ್ ಅವರನ್ನು ಡಾ| ಜಿ. ಶಂಕರ್ ಅವರು ಸಮ್ಮಾನಿಸಿ, ಗೌರವಿಸಿದರು.
ಸೋಮವಾರ ಚಂಡಿಕಾ ಹೋಮ, ಭಜನೆ, ಅಂಬಿಕಾ ಕಲ್ಪೋಕ್ತ ಪೂಜೆ, ಧಾರ್ಮಿಕ ಸಭೆ ಸಹಿತ ವಿವಿಧ ಕಾರ್ಯಕ್ರಮಗಳು ಜರಗಿದವು. ಲಲಿತಾ ಪಂಚಮಿ ಪ್ರಯುಕ್ತ ಸಾವಿರಾರು ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಜರಗಿತು. ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಉಪಾಧ್ಯಾಯ, ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಕ್ಷೇತ್ರಾಡಳಿತ ಸಮಿತಿ ಮಾಜಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷ ಗುಂಡು ಬಿ. ಅಮೀನ್, ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ ಶರಣ್ ಮಟ್ಟು, ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಉಷಾ ರಾಣಿ, ಕಾಪು ನಾಲ್ಕುಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷ ಮನೋಜ್ ಕಾಂಚನ್, ಕಾಪು ನಾಲ್ಕು ಪಟ್ಣ ಮೊಗವೀರ ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಕರ್ಕೇರ ಮೊದಲಾದವರಿದ್ದರು. ಸಾಂಸ¢ತಿಕ ಕಾರ್ಯಕ್ರಮ ಸಮಿತಿ ಸಂಚಾಲಕ ಸತೀಶ್ ಅಮೀನ್ ಪಡುಕೆರೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Related Articles
ಬೆಳಗ್ಗೆ 9ಕ್ಕೆ ಚಂಡಿಕಾ ಹೋಮ, 9.30ರಿಂದ 4.45ರ ಭಜನೆ, ಮಧ್ಯಾಹ್ನ 12ಕ್ಕೆ ನವದುರ್ಗೆಯರಿಗೆ ಮಹಾಮಂಗಳಾರತಿ, 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 5ರಿಂದ ಧಾರ್ಮಿಕ ಸಭೆ, ಸಂಜೆ 5.45ರಿಂದ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, 6.30ರಿಂದ ಸ್ಥಳೀಯ ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ರಾಘವೇಂದ್ರ ಆಚಾರ್ಯ ಜನ್ಸಾಲೆ ನೇತೃತ್ವದ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನದ ಯಕ್ಷ ಕಲಾ ತಂಡದವರಿಂದ ಚಕ್ರ ಚಂಡಿಕೆ ಯಕ್ಷಗಾನ ಪ್ರದರ್ಶನ ನಡೆಯಲಿದೆ.
Advertisement