Advertisement

UCO Bank: ಮಂಗಳೂರಿನಲ್ಲೂ ಸಿಬಿಐ ತನಿಖೆ

12:35 AM Dec 06, 2023 | Team Udayavani |

ಮಂಗಳೂರು: ಯುಕೊ ಬ್ಯಾಂಕ್‌ನ ಖಾತೆಗಳಲ್ಲಿ 820 ಕೋಟಿ ರೂಪಾಯಿ ಮೌಲ್ಯದ ಐಎಂಪಿಎಸ್‌ ವ್ಯವಹಾರ ಅಕ್ರಮವಾಗಿ ನಡೆದಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಶೋಧ ನಡೆಸಿದೆ.

Advertisement

ಕೋಲ್ಕತಾ ಮತ್ತು ಮಂಗಳೂರು ಸೇರಿದಂತೆ ಸುಮಾರು 13 ಸ್ಥಳಗಳಲ್ಲಿ ಆರೋಪಿಗಳು ಮತ್ತು ಖಾಸಗಿ ವ್ಯಕ್ತಿ ಗಳು/ಬ್ಯಾಂಕ್‌ ಅಧಿಕಾರಿಗಳು ಸೇರಿ ದಂತೆ ಸಂಸ್ಥೆ ವಿಚಾರಣೆ, ಶೋಧ ನಡೆಸಿದೆ ಎಂದು ಸಿಬಿಐ ಪ್ರಕಟನೆ ತಿಳಿಸಿದೆ.

ಹುಡುಕಾಟದ ಸಮಯದಲ್ಲಿ, ಮೊಬೈಲ್‌ ಫೋನ್‌ಗಳು, ಲ್ಯಾಪ್‌ಟಾಪ್‌ಗ್ಳು, ಕಂಪ್ಯೂಟರ್‌ ಸಿಸ್ಟಮ್‌ಗಳು, ಇಮೇಲ್‌ ಆಕ್ರೈವ್‌ಗಳು ಮತ್ತು ಡೆಬಿಟ್‌/ಕ್ರೆಡಿಟ್‌ ಕಾರ್ಡ್‌ಗಳು ಸೇರಿದಂತೆ ಎಲೆಕ್ಟ್ರಾನಿಕ್‌ ಪುರಾವೆಗಳನ್ನು ಪಡೆಯಲಾಗಿದೆ.
ಯುಕೋ ಬ್ಯಾಂಕ್‌ನಿಂದ ಬಂದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿದೆ.

ಈ ಬ್ಯಾಂಕ್‌ನ ಇಬ್ಬರು ಸಹಾಯಕ ಎಂಜಿನಿಯರ್‌ಗಳು ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಅನುಮಾನಾಸ್ಪದ ತತ್‌ಕ್ಷಣದ ಪಾವತಿ ಸೇವೆ (ಐಎಂಪಿಎಸ್‌) ವಹಿವಾಟಿನ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ನ. 10 ಹಾಗೂ 13ರ ಮಧ್ಯೆ 820 ಕೋಟಿ ರೂ. ಮೊತ್ತವನ್ನು ಏಳು ಖಾಸಗಿ ಬ್ಯಾಂಕ್‌ಗಳ 14,000 ಖಾತೆದಾರರಿಂದ ಐಎಂಪಿಎಸ್‌ ಆಂತರಿಕ ವಹಿವಾಟುಗಳ ಮೂಲಕ ಯುಕೋ ಬ್ಯಾಂಕ್‌ನ 41,000 ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

ಅಚಾನಕ್‌ ಆಗಿ ಖಾತೆಗೆ ಹಣ ಬಿದ್ದ ಕೂಡಲೇ ಕೆಲವರು ವಿತ್‌ಡ್ರಾ ಕೂಡ ಮಾಡಿಕೊಂಡಿದ್ದಾರೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಸಿಬಿಐ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next